ಸುಳ್ಯ: ದ ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪರ ಚುನಾವಣಾ ಪ್ರಚಾರಕ್ಕೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ಏಪ್ರಿಲ್ 23 ಮಂಗಳವಾರ
ಬೆ 8.30 ರಿಂದ 10 ಗಂಟೆ ತನಕ ಕಡಬ ಪೇಟೆ ಯಲ್ಲಿ ಪಾದಯಾತ್ರೆಯಲ್ಲಿ ಮತಯಾಚನೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿಯ ರಾಜ್ಯ ,ಜಿಲ್ಲಾ , ವಿಧಾನಸಭಾ ಕ್ಷೇತ್ರ ಮಟ್ಟದ ಪ್ರಮುಖರು ಹಾಗೂ ಕ್ಷೇತ್ರದ ಶಾಸಕರು ಮತ್ತು ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಮಂಡಲ ಸಮಿತಿ ಪ್ರಕಟಣೆ ತಿಳಿಸಿದ್ದಾರೆ.