ನವದೆಹಲಿ:ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಬಿಜೆಪಿಗೆ ರಾಜೀನಾಮೆ ನೀಡಲಿದ್ದಾರೆ ಎನ್ನುವ ವಂದತಿಗಳು ವ್ಯಾಪಕವಾಗಿ ಹರಡಿದೆ. ಈನಡುವೆ ಅವರು ಗೃಹ ಸಚಿವ ಅಮಿತ್ ಶಾ ಹಾಗು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರನ್ನು ಭೇಟಿಯಾಗಿದ್ದಾರೆ ಎಂದು
ವರದಿಯಾಗಿದೆ. ರಾಜಕೀಯ ವಲಯದಲ್ಲಿ ಅಣ್ಣಾಮಲೈ ಅವರು ಬಿಜೆಪಿ ತೊರೆಯಲಿದ್ದಾರೆ ಎನ್ನುವ ಕುರಿತು ಚರ್ಚೆಯಾಗುತ್ತಿದೆ. ಇದಕ್ಕೆ ಪ್ರತಿಕ್ರಿಯಿಸಿದ್ದ ಅವರು, ‘ನಾನು ಎರಡು ದಿನಗಳ ನಂತರ ಇದರ ಕುರಿತು ಮಾತನಾಡುತ್ತೇನೆ’ ಎಂದು ಹೇಳಿದ್ದರು.2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ ಪಕ್ಷವು 108 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಅಧಿಕಾರ ವಹಿಸಿಕೊಂಡ ನಂತರ ಅಲ್ಲಿನ ರಾಜಕೀಯದಲ್ಲಿ ನಡೆಯುತ್ತಿರುವ ಮಹತ್ವದ ಬೆಳವಣಿಗೆ ಇದಾಗಿದೆ.
ಅಣ್ಣಾಮಲೈ ಅವರು ಹೊಸ ಪಕ್ಷ ಸ್ಥಾಪನೆ ಮಾಡಲಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.














