ನವದೆಹಲಿ:ತಮಿಳುನಾಡಿನ ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರ ರಾಜೀನಾಮೆಯನ್ನು ಬಿಜೆಪಿ ಹೈಕಮಾಂಡ್ ಅಂಗೀಕರಿಸಿದೆ. ಇದರೊಂದಿಗೆ ಪಕ್ಷದೊಂದಿಗಿನ ಅವರ ಆರು ವರ್ಷಗಳ ಸಖ್ಯ ಕೊನೆಗೊಂಡಿದೆ.ಅಣ್ಣಾಮಲೈ ಅವರ ರಾಜೀನಾಮೆಯನ್ನು ಬಿಜೆಪಿ ರಾಷ್ಟ್ರೀಯ
ಅಧ್ಯಕ್ಷ ನಿತಿನ್ ನವೀನ್ ಅಂಗೀಕರಿಸಿದ್ದಾರೆ ಎಂದು ವರದಿ ತಿಳಿಸಿವೆ.ಅಣ್ಣಾಮಲೈ ಅವರು ನಿತಿನ್ ನವೀನ್, ಅಮಿತ್ ಶಾ ಸೇರಿದಂತೆ ಹಿರಿಯ ನಾಯಕರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದರು. ತಮ್ಮ ನಿರ್ಧಾರಕ್ಕೆ ಕಾರಣವನ್ನೂ ವಿವರಿಸಿದ್ದರು. ಆದರೆ, ‘ರಾಜೀನಾಮೆ ನಿರ್ಧಾರವನ್ನು ಮರು ಪರಿಶೀಲಿಸಿ’ ಎಂದು ಬಿಜೆಪಿ ಹೈಕಮಾಂಡ್ ಅಣ್ಣಾಮಲೈ ಅವರಿಗೆ ಮನವಿ ಮಾಡಿತ್ತು.
2021ರಿಂದ 2025ರವರೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿದ್ದರು. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಜತೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದರಿಂದ ಅವರು ಅಸಮಾಧಾನಗೊಂಡಿದ್ದರು.
ಹೊಸ ರಾಜಕೀಯ ಪಕ್ಷ ಸ್ಥಾಪಿಸುವ ಸೂಚನೆಯನ್ನು ಅಣ್ಣಾಮಲೈ ನೀಡಿದ್ದಾರೆ













