ಸುಬ್ರಹ್ಮಣ್ಯ: ತಮಿಳುನಾಡು ಬಿಜೆಪಿ ಮುಖಂಡ ಕೆ. ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಕುಟುಂಬ ಸಮೇತರಾಗಿ ಜೂ.29 ರಂದು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಬಳಿಕ ಶ್ರೀ ಸಂಪುಟ ನರಸಿಂಹಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದರು. ಬಳಿಕ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ಅಣ್ಣಾಮಲೈ ಅವರ ಪತ್ನಿ, ಮಕ್ಕಳು ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.