ಕಡಬ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕಡಬದಲ್ಲಿ ಬೃಹತ್ ರೊಡ್ ಶೋ ನಡೆಸಿ ದಕ್ಷಿಣ ಕನ್ನಡ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪರವಾಗಿ ಚುನಾವಣಾ ಪ್ರಚಾರ ಕೈಗೊಂಡರು. ಕಡಬದ ಎಪಿಎಂಸಿ ಪ್ರಾಂಗಣ ಸಮೀಪದಿಂದ ಆರಂಭಗೊಂಡ
ರೋಡ್ ಶೋ ಪೇಟೆಯಲ್ಲಿ ಸಾಗಿ ಮುಖ್ಯ ಪೇಟೆಯಲ್ಲಿ ಸಮಾಪನಗೊಂಡಿತು. ಹೆಲಿಕಾಪ್ಟರ್ ಮೂಲಕ ಆಗಮಿಸಿದ ಅಣ್ಣಾಮಲೈ ಕಡಬ ಪೇಟೆಯಲ್ಲಿ ದ.ಕ. ಬಿಜೆಪಿ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಮತಯಾಚನೆ ನಡೆಸಿದರು. ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಚಿವ ಎಸ್.ಅಂಗಾರ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ,ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ, ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಮುಖಂಡರಾದ ಹರೀಶ್ ಕಂಜಿಪಿಲಿ, ಎಸ್.ಎನ್.ಮನ್ಮಥ, ಎ.ವಿ.ತೀರ್ಥರಾಮ, ರಾಕೇಶ್ ರೈ ರೈ ಕೆಡೆಂಜಿ, ವಿನಯಕುಮಾರ್ ಕಂದಡ್ಕ, ಸುಬೋದ್ ಶೆಟ್ಟಿ ಮೇನಾಲ, ಪ್ರದೀಪ್ ರೈ ಮನವಳಿಕೆ, ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ಸಂತೋಷ್ ಜಾಕೆ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.