ಸುಳ್ಯ:ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕ ವಿರೋಧಿ ದಿನಾಚರಣೆ ನಡೆಯಿತು. ದ ಕ ಗೌಡ ವಿದ್ಯಾ ಸಂಘದ ನಿರ್ದೇಶಕರಾದ ಡಾ. ಸಾಯಿ ಗೀತಾ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ
ಪೊಲೀಸ್ ವೃತ್ತ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ್, ಅವರು ಮಾದಕ ದ್ರವ್ಯ ಸೇವನೆಯಿಂದಾಗುವ ವೈಯುಕ್ತಿಕ ಮತ್ತು ಸಾಮಾಜಿಕ ತೊಂದರೆಗಳ ಬಗ್ಗೆ ಮಾಹಿತಿ ನೀಡಿದರು. ಮಾದಕ ದ್ರವ್ಯದ ಸೇವನೆ ಮತ್ತು ಮಾರಾಟ ಮಾಡುವವರ ವಿರುದ್ಧ ವಿಧಿಸಲಾಗುವ ಶಿಕ್ಷೆಯ ಪ್ರಮಾಣದ ಬಗ್ಗೆ ಮಾಹಿತಿಯನ್ನು ನೀಡಿದರು.
ಪ್ರೊಬೇಷನರಿ ಸಬ್ ಇನ್ಸ್ಪೆಕ್ಟರ್ ಆಫ್ ಪೊಲೀಸ್ ಕೃಷ್ಣ ಅವರು ಮಾತನಾಡಿದರು.ಪೊಲೀಸ್ ಕಾನ್ಸ್ಟೇಬಲ್ ಜ್ಯೋತಿ ಇವರು ಪೋಕ್ಸೋ ಕಾಯ್ದೆಯ ಬಗ್ಗೆ ಮಾಹಿತಿ ನೀಡಿದರು.ಕಾಲೇಜಿನ ಪ್ರಾಂಶುಪಾಲೆ ಸ್ವರ್ಣಕಲಾ. ಎ ಎಸ್ ಸ್ವಾಗತಿಸಿದರು. ಇತಿಹಾಸ ಉಪನ್ಯಾಸಕರಾದ ಪ್ರಸನ್ನ ಎನ್ ಹೆಚ್ ವಂದಿಸಿದರು. ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.





























