ಸುಳ್ಯ:ಮಾದಕ ವ್ಯಸನ ವಿರೋಧಿ ಜಾಗೃತಿ ಕಾರ್ಯಕ್ರಮ ಸುಳ್ಯದ ನೆಹರೂ ಸ್ಮಾರಕ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪೊಲೀಸ್ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ಮಾದಕ ವಸ್ತುಗಳ ಬಳಕೆ, ಸಾಗಾಟ ಹಾಗೂ
ಮಾರಾಟಕ್ಕೆ ಸಂಬಂಧಿಸಿದ ಕಾನೂನುಗಳು ಮತ್ತು ಶಿಕ್ಷೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ತಹಶೀಲ್ದಾರ್ ಮಂಜುಳಾ ಎಂ, ಸುಳ್ಯ ಸುಳ್ಯ ಪೊಲೀಸ್ ಉಪನಿರೀಕ್ಷಕರಾದ ಸಂತೋಷ್ ಬಿ.ಪಿ, ನೆಹರು ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೆರಾಲ್, ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ. ಎನ್.ಎಂ.ಪಿ.ಯು.ಸಿ. ಪ್ರಾಂಶುಪಾಲೆ ಮಿಥಾಲಿ ಪಿ. ರೈ ಉಪಸ್ಥಿತರಿದ್ದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಅನುರಾಧಾ ಕುರುಂಜಿ ಕಾರ್ಯಕ್ರಮ ನಿರೂಪಿಸಿದರು.









