ಪೆರುವಾಜೆ:ಪೆರುವಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಬೇಕು ಎಂದು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರಿಗೆ ಸಚಿನ್ ರಾಜ್ ಶೆಟ್ಟಿ ಮನವಿ ಸಲ್ಲಿಸಿದ್ದಾರೆ.ಶ್ರೀ ಜಲದುರ್ಗಾ ದೇವಿ ದೇವಸ್ಥಾನದ ಮುಂಭಾಗದಲ್ಲಿ ಒಳಚರಂಡಿ ವ್ಯವಸ್ಥೆ ಹಾಗೂ ಪೆರುವಾಜೆ ಕೊಲ್ಯ ದುರ್ಗಾ ನಗರ ರಸ್ತೆಗೆ ವಿಶೇಷ ಅನುದಾನ ನೀಡುವಂತೆ ಮನವಿಯಲ್ಲಿ ವಿನಂತಿಸಲಾಗಿದೆ. ಸಚಿವರು ಅನುದಾನ ನೀಡುವ ಭರವಸೆ ನೀಡಿದ್ದಾರೆ ಎಂದು ಸಚಿನ್ರಾಜ್ ತಿಳಿಸಿದ್ದಾರೆ.






