ಸುಳ್ಯ:’ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026ಕ್ಕೆ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಅನುರಾಧ ಕುರುಂಜಿ ಆಯ್ಕೆಯಾಗಿದ್ದಾರೆ.ಶಿಕ್ಷಣ ಕ್ಷೇತ್ರ, ಸಾಹಿತ್ಯ ಸಮಾಜಸೇವೆ ಹಾಗೂ ಸಂಘಟನೆಯಲ್ಲಿ ಸಲ್ಲಿಸಿರುವ ಸೇವೆಗಾಗಿ ಗಡಿನಾಡು ಕಾಸರಗೋಡಿನ
ಡಾ.ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಅವರ ಸಂಚಾಲಕತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಕನ್ನಡ ಭವನ ಮತ್ತು ಗ್ರಂಥಾಲಯ ಈ ಪ್ರಶಸ್ತಿಯನ್ನು ನೀಡುತ್ತದೆ. ಡಾ.ಅನುರಾಧ ಕುರುಂಜಿ ವ್ಯಕ್ತಿತ್ವ ವಿಕಸನ ತರಬೇತುದಾರರು, ಸಮಾಜಸೇವಕಿ, ಸಂಘಟಕಿ, ಕವಯತ್ರಿ, ಲೇಖಕಿಯಾಗಿ ಗುರುತಿಸಿಕೊಂಡಿದ್ದಾರೆ. 3600 ಕ್ಕೂ ಮಿಕ್ಕಿ ತರಬೇತಿಗಳನ್ನು ನೀಡಿದ್ದಾರೆ.ಜುಲೈ 26ರಂದು ನಡೆಯಲಿರುವ ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ವೇದಿಕೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.








