ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ,ನಟಿ ಅಪರ್ಣಾ (57) ಇಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ನಿಧನರಾದರು ಎಂದು ವರದಿಯಾಗಿದೆ.ಈ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ಎದೆ ತುಂಬಿ ಹಾಡುವೆನು, ಆಲ್ ಇಂಡಿಯಾ ರೆಡಿಯೊ ಸೇರಿದಂತೆ
ಹಲವೆಡೆ ನಿರೂಪಕಿಯಾಗಿದ್ದ ಅಪರ್ಣಾ, ಮಸಣದ ಹೂವು ಚಿತ್ರದ ಮೂಲಕ ಚಂದನವನಕ್ಕೆ ಪದಾರ್ಪಣೆ ಮಾಡಿದ್ದರು.
ಕಿರುತರೆಯಲ್ಲಿಯೂ ಮಿಂಚಿದ್ದ ನಟಿ ಮುಕ್ತ– ಮುಕ್ತ , ಮೂಡಲ ಮನೆ ಸೇರಿ ಹಲವು ಧಾರಾವಾಹಿಗಳಲ್ಲೂ ಕಾಣಿಸಿಕೊಂಡಿದ್ದರು.
ಸರ್ಕಾರಿ ಕಾರ್ಯಕ್ರಮಗಳಲ್ಲಿ, ದೂರದರ್ಶನದಲ್ಲಿ ನಿರೂಪಕಿಯಾಗಿದ್ದರು.
ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನ ನಮ್ಮ ಮೆಟ್ರೊದಲ್ಲಿ ಹಿನ್ನೆಲೆ ಧ್ವನಿ ನೀಡುವ ಮೂಲಕ ಖ್ಯಾತಿ ಗಳಿಸಿದ್ದರು. ಅಚ್ಚ ಕನ್ನಡದಲ್ಲಿ ನಿರೂಪಣೆ ಮಾಡುವ ಮೂಲಕ ಪ್ರಸಿದ್ಧಿ ಪಡೆದಿದ್ದರು.