ಸುಳ್ಯ:ಬಹು ಕಾಲದ ಬೇಡಿಕೆಯಾದ ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಅರಮನೆಗಯ ಎಂಬಲ್ಲಿ ಸಂಪರ್ಕ ಸೇತುವೆ ನಿರ್ಮಾಣ ಪೂರ್ತಿಯಾಗಿದ್ದು ಉದ್ಘಾಟನೆಗೆ ಸಿದ್ಧಗೊಂಡಿದೆ. ಉಪಶಮನ ನಿಧಿ (ಮಿಟಿಗೇಷನ್ ಫಂಡ್)ಯಡಿ ಅರಮನೆಗಯದಲ್ಲಿ ಸಂಪರ್ಕ ಸೇತುವೆ ನಿರ್ಮಾಣಕ್ಕೆ 1.75 ಕೋಟಿ ಅನುದಾನವನ್ನು

ಬಿಡುಗಡೆ ಮಾಡಲಾಗಿತ್ತು.ರಾಜ್ಯ ವಿಪತ್ತು ಉಪಶಮನ ನಿಧಿಯಡಿ ದ.ಕ.ಜಿಲ್ಲೆಗೆ ಬಿಡುಗಡೆಯಾದ ಅನುದಾನದಲ್ಲಿ ಅರಮನೆಗಯ ಸಂಪರ್ಕ ಸೇತುವೆಗೆ ಅನುದಾನ ಬಿಡುಗಡೆಯಾಗಿ ಕಳೆದ ನವೆಂಬರ್ ತಿಂಗಳಲ್ಲಿ ಕಾಮಗಾರಿಗೆ ಶಾಸಕಿ ಭಾಗೀರಥಿ ಮುರುಳ್ಯ ಅವರು ಗುದ್ದಲಿ ಪೂಜೆ ನೆರವೇರಿಸಿದ್ದರು. ಇದೀಗ ಸೇತುವೆ ಕಾಮಗಾರಿ ಪೂರ್ತಿಯಾಗಿದೆ ಎಂದು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗೋಪಾಲ್ ಮಾಹಿತಿ ನೀಡಿದ್ದಾರೆ. 30 ಮೀಟರ್ ಉದ್ದ ಹಾಗೂ 6.40 ಮೀಟರ್ ಅಗಲದ ಸೇತುವೆ ನಿರ್ಮಿಸಲಾಗಿದೆ. ಇಲ್ಲಿ ಜನರ ಸಂಚಾರಕ್ಕೆ ಶಾಶ್ವತ ಪರಿಹಾರ ಮಾಡಬೇಕು ಎಂಬುದು ಹಲವು ವರ್ಷಗಳ ಬೇಡಿಕೆಯಾಗಿತ್ತು.











