ಸುಳ್ಯ:ಬಹು ಕಾಲದ ಬೇಡಿಕೆಯಾದ ಅರಂತೋಡು ಗ್ರಾಮದ ಅರಮನೆಗಯ ಎಂಬಲ್ಲಿ ಸಂಪರ್ಕ ಸೇತಯವೆ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದೆ.ನಾಳೆ(ನ.12) ಸಂಜೆ 4ಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಉಪಶಮನ ನಿಧಿಯಡಿ ಅರಮನೆಗಯದಲ್ಲಿ

ಸಂಪರ್ಕ ಸೇತುವೆ ನಿರ್ಮಾಣಕ್ಕೆ 1.70 ಕೋಟಿ ಅನುದಾನವನ್ನು ಜಿಲ್ಲಾಧಿಕಾರಿಗಳ ಕಚೇರಿಯ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಂಜೂರು ಮಾಡಿದೆ ಎಂದು ಲೋಕೋಪಯೋಗಿ ಇಲಾಖೆಯ ಸುಳ್ಯ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೆ.ಗೋಪಾಲ್ ಮಾಹಿತಿ ನೀಡಿದ್ದಾರೆ.
ರಾಜ್ಯ ವಿಪತ್ತು ಉಪಶಮನ ನಿಧಿಯಡಿ ದ.ಕ.ಜಿಲ್ಲೆಗೆ ಬಿಡುಗಡೆಯಾದ ಅನುದಾನದಲ್ಲಿ ಅರಮನೆಗಯ ಸಂಪರ್ಕ ಸೇತುವೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ನಡೆಸಲು ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಂಜೂರಾತಿ ನೀಡಲಾಗಿತ್ತು.
ಅರಮನೆಗಯದಲ್ಲಿ ಜನರ ಸಂಚಾರಕ್ಕೆ ಶಾಶ್ವತ ಪರಿಹಾರ ಮಾಡಬೇಕು ಎಂಬುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ಈ ಹಿನ್ನಲೆಯಲ್ಲಿ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಆಗಿದೆ.












