ಸುಳ್ಯ: ಅರಮನೆಗಯದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಅನುದಾನ ಒದಗಿಸಬೇಕು ಎಂದು ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ಅವರು ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿಗಳ ನಿರ್ದೇಶನದಂತೆ
ಆರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಮನೆಗಯ ತೂಗುಸೇತುವೆಯ ಸಂಚಾರ ನಿರ್ಬಂಧಿಸಿರುವ ಕಾರಣ ಅಲ್ಲಿಯ ನಿವಾಸಿಗಳಿಗೆ ಶಾಶ್ವತ ಪರ್ಯಾಯ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಹೊಸ ಸೇತುವೆ ಅತೀ ಅಗತ್ಯ. ಆದುದರಿಂದ ಕೂಡಲೇ ಹೊಸ ಸೇತುವೆ ಮಂಜೂರು ಮಾಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಭವಾನಿ ಚಿಟ್ಟನ್ನೂರು, ಸದಸ್ಯ ವೆಂಕಟ್ರಮಣ ಪೆತ್ತಾಜೆ, ಆರಂತೋಡು ತೊಡಿಕಾನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ ಕುತ್ತಮೊಟ್ಟೆ ಉಪಸ್ಥಿತರಿದ್ದರು.