ಅರಂಬೂರು:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಇಡ್ಯಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂ ಆರ್ ಪಿ ಎಲ್ ವತಿಯಿಂದ ನೀಡಲ್ಪಟ್ಟ ನೂತನ ಶೌಚಾಲಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ
ಸುಳ್ಳ ಕ್ಷೇತ್ರ ಶಿಕ್ಷಣಾಧಿಕಾರಿ ಯಮುನಪ್ಪ ಸಿದ್ದಪ್ಪ ಹರಗಿ, ಆಲೆಟಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಶೀತಲ್, ಶಾಲಾ ಎಸ್ಡಿಎಂಸಿ ಅಧ್ಯಕ್ಷ ಯೂಸುಫ್ ಅಂಜಿಕ್ಕಾರ್, ಜಗದೀಶ್ ಸರಳಿಕುಂಜ , ಶ್ರೀಪತಿ ಭಟ್,ಹೇಮಂತ್ ಕಾಮತ್, ಪ್ರಭಾಕರನ್ ನಾಯರ್, ಗ್ರಾಮ ಪಂಚಾಯತ್ ಮಾಜಿ ಸದಸ್ಯರುಗಳಾದ ಅನಿತಾ, ವೇದಾವತಿ, ಪುಷ್ಪಾವತಿ ಕುಡೆಕಲ್ಲು,ಸುದೇಶ್,ಹಾಗೂ ಎಸ್ಡಿಎಂಸಿ ಸದಸ್ಯರುಗಳು, ವಿದ್ಯಾರ್ಥಿಗಳ ಪೋಷಕ ವೃಂದ, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.ಶಾಲಾ ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ ಸ್ವಾಗತಿಸಿ, ಅಶೋಕ್ ಪೀಚೆ ವಂದಿಸಿದರು.
ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ಈ ಶೌಚಾಲಯ ನಿರ್ಮಾಣಗೊಳ್ಳುತ್ತಿದೆ.









