ಅರಂತೋಡು:ಕಾರು ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅರಂತೋಡು ಗ್ರಾಮದ ಪೆಲ್ತಡ್ಕದಲ್ಲಿ ಅ.24ರಂದು ಸಂಭವಿಸಿದೆ.ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಮಧ್ಯೆ ಪೆಲ್ತಡ್ಕದಲ್ಲಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.