ಅರಂತೋಡು:ಸುಳ್ಯ ಕ್ಷೇತ್ರದಲ್ಲಿ ಶಾಸಕನಾಗಿ,ಸಚಿವನಾಗಿ ಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದೇನೆ ಎಂಬ ತೃಪ್ತಿ ಇದೆ.ಮುಂದೆಯೂ ಜನರ ಬೇಡಿಕೆಗಳಿಗೆ, ಸಮಸ್ಯೆಗಳಿಗೆ ಸ್ಪಂದಿಸಲು ಸದಾ ಸಿದ್ಧ ಎಂದು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಹೇಳಿದ್ದಾರೆ. ಅರಂತೋಡು ಗ್ರಾಮ ಪಂಚಾಯತ್ ವತಿಯಿಂದ ನೂತನವಾಗಿ ನಿರ್ಮಿಸಲಾದ ಅಮೃತ ಉದ್ಯಾನವನ, ಅಮೃತ ಮುಕ್ತಿ ಧಾಮ ಹಾಗೂ ಅಮೃತ ಸಭಾಂಗಣದ ಉದ್ಘಾಟನೆಯನ್ನು
ನೆರವೇರಿಸಿ ಅವರು ಮಾತನಾಡಿದರು. ಕ್ಷೇತ್ರದಲ್ಲಿ ಯಾರೂ ನಿರೀಕ್ಷೆ ಮಾಡದ ರೀತಿಯಲ್ಲಿ ಅಭಿವೃದ್ಧಿ ಆಗಿದೆ. ಜನರ ಪ್ರಮುಖ ಸಮಸ್ಯೆಗಳಿಗೆ, ಬೇಡಿಕೆಗಳಿಗೆ ಪರಿಹಾರ ಹುಡುಕುವ ಕಾರ್ಯ ಆಗಿದೆ. ಸುಳ್ಯ ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲಿ ಹೆಚ್ಚಿನ ಅಭಿವೃದ್ಧಿ ಮಾಡಿದ ತೃಪ್ತಿ ಇದೆ.1994 ರ ಬಳಿಕ ಕ್ಷೇತ್ರದಲ್ಲಿ ಅಭೂತಪೂರ್ವ ಅಭಿವೃದ್ಧಿ ಆಗಿದೆ.ಈಗ ಎಲ್ಲಾ ಕಡೆಯಲ್ಲಿಯೂ ಅಭಿವೃದ್ಧಿ ಬೇಡಿಕೆ, ಒತ್ತಡಗಳು ಕೇಳಿ ಬರುತಿದೆ.1994ರ ಮೊದಲು ಈ ರೀತಿ ಅಭಿವೃದ್ಧಿ ಯಾಕೆ ಮಾಡಿಲ್ಲಾ ಎಂದು ಅವರು

ಪ್ರಶ್ನಿಸಿದರು.ಜನರ ಆಶೋತ್ತರಗಳಿಗೆ ಖಂಡಿತಾ ಸ್ಪಂದನೆ ಮಾಡಿಯೇ ಮಾಡುತ್ತೇವೆ.ದೇಶದಲ್ಲಿ ಮತ್ತು ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಗಳು, ಗ್ರಾಮೀಣ ರಸ್ತೆಗಳ, ಸೇತುವೆಗಳು ಅಭಿವೃದ್ಧಿ ಆಗ್ತಾ ಇದೆ.
ಬೇಡಿಕೆಗಳು, ಸಮಸ್ಯೆಗಳು ಸಾಕಷ್ಟು ಇನ್ನೂ ಇದೆ. ಅದರ ಪರಿಹಾರ ಖಂಡಿತಾ ಮಾಡಿಯೇ ಮಾಡುತ್ತೇವೆ. ಟೀಕೆಗಳಿಗೆ, ಆರೋಪಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಅವರು ಹೇಳಿದರು.

ಲಸಮಾರಂಭದ ಅಧ್ಯಕ್ಷತೆಯನ್ನು ಅರಂತೋಡು ಗ್ರಾ.ಪಂ. ಅಧ್ಯಕ್ಷೆ ಹರಿಣಿ ಡಿ.ಡಿ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಸುಳ್ಯ ತಾಲೂಕು ಪಂಚಾಯತ್ ಅಧಿಕಾರಿ ಭವಾನಿಶಂಕರ ಎನ್., ಜಿ.ಪಂ. ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ಸುಳ್ಯ ತಾ.ಪಂ. ಮಾಜಿ ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ, ವಿಶ್ರಾಂತ ಪ್ರಾಂಶುಪಾಲರು ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ಆರ್. ಗಂಗಾಧರ, ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್, ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಅಧ್ಯಕ್ಷ ಕಿಶೋರ್ ಕುಮಾರ್ ಯು ಎಂ, ಅರಂತೋಡು ಶ್ರೀ ಮಲ್ಲಿಕಾರ್ಜುನ ಭಜನಾ ಮಂಡಳಿ ಅಧ್ಯಕ್ಷ ಕೆ.ಆರ್.ಪದ್ಮನಾಭ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಪಾಜೆ ವಲಯ ಮೇಲ್ವಿಚಾರಕ ಸುಧೀರ್ ನೆಕ್ರಾಜೆ ಭಾಗವಹಿಸಿದ್ದರು. ಅರಂತೋಡು ಗ್ರಾ.ಪಂ.ಸದಸ್ಯರಾದ ವೆಂಕಟ್ರಮಣ ಪೆತ್ತಾಜೆ, ರವೀಂದ್ರ ಜಿ, ಮಾಲಿನಿ ಉಳುವಾರು,ಪುಷ್ಪಾಧರ ಕೆ.ಜಿ, ಸುಜಯ ಎಂ.ಎ, ಉಷಾ ಅಡ್ಯಡ್ಕ, ಭವಾನಿ ಸಿ.ಎ, ವಿನೋದಕುಮಾರಿ ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಎಂ.ಆರ್ ಸ್ವಾಗತಿಸಿ, ಸದಸ್ಯ ಶಿವಾನಂದ ಕುಕ್ಕುಂಬಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಸದಸ್ಯ ಕೇಶವ ಅಡ್ತಲೆ ವಂದಿಸಿದರು. ದಯಾನಂದ ಪತ್ತುಕುಂಜ ಕಾರ್ಯಕ್ರಮ ನಿರೂಪಿಸಿದರು.