ಅರಂತೋಡು: ಅರಂತೋಡು ಗ್ರಾಮ ಪಂಚಾಯತ್ನ ಘನತ್ಯಾಜ್ಯ ಘಟಕಕ್ಕೆ ಬೆಂಕಿ ತಗುಲಿದ್ದು ಘಟಕ ಹೊತ್ತಿ ಉರಿದ ಘಟನೆ ವರದಿಯಾಗಿದೆ. ಘಟಕದಲ್ಲಿ ಪೂರ್ತಿಯಾಗಿ ತ್ಯಾಜ್ಯ ತುಂಬಿಡಲಾಗಿದ್ದು ಬೆಂಕಿ ತಗುಲಿ ಹೊತ್ತಿ ಉರಿದಿದೆ. ಕಟ್ಟಡ ಮತ್ತಿತರ ಸೇರಿ ಅಪಾರ ಹಾನಿ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಬೆಂಕಿ ನಂದಿಸುವ ಪ್ರಯತ್ನ ನಡೆಸಲಾಗುತಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post





