ಅರಂತೋಡು:ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಅರಂತೋಡು ಇದರ ವತಿಯಿಂದ 21 ನೇ ವರ್ಷದ ಸೌಹಾರ್ದ ಇಫ್ತಾರ್ ಕೂಟ ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಿತು. ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಹಾಗೂ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ರವರ ಅಧ್ಯಕ್ಷತೆ ವಹಿಸಿದ್ದರು.ಅರಂತೋಡು ಬದ್ರಿಯಾ ಜುಮಾ ಮಸೀದಿಯ ಖತೀಬರಾದ
ಇಸ್ಮಾಯಿಲ್ ಫೈಝಿ ದುವಾ ನೆರವೇರಿಸಿದರು.ನಿವೃತ್ತ ಪ್ರಾಂಶುಪಾಲ ಕೆ.ಆರ್ ಗಂಗಾಧರ್ ಉದ್ಘಾಟಿಸಿದರು.ಅಜ್ಜಾವರ ಚೈತನ್ಯ ಸೇವಾಶ್ರಮದ ಸ್ವಾಮಿ ಯೋಗೇಶ್ವರಾನಂದ ಸರಸ್ವತಿ, ಗುತ್ತಿಗಾರು ಸೈಂಟ್ ಮೇರೀಸ್ ಚರ್ಚ್ನ ಧರ್ಮಗುರು ಆದರ್ಶ್ ಜೋಸೆಫ್, ಪೇರಡ್ಕ ಮುಹಿದ್ಧೀನ್ ಜುಮಾ ಮಸೀದಿಯ ಖತೀಬರಾದ ನಯೀಮ್ ಫೈಝಿ ಅಲ್ ಮಹಬರಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ,ಸುಳ್ಯ ನಗರ ಪ್ರಾಧೀಕಾರ ಅಧ್ಯಕ್ಷ ಕೆ.ಎಂ ಮುಸ್ತಫ, ತಹಶೀಲ್ದಾರ್ ಮಂಜುಳ, ಸುಳ್ಯ ಸರ್ಕಲ್ ಇನ್ಸ್ ಪೆಕ್ಟರ್ ತಿಮ್ಮಪ್ಪ ನಾಯ್ಕ್, ವಲಯ ಅರಣ್ಯಾಧಿಕಾರಿ ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಪ್ಪ ಹರಗಿ, ಜಿಲ್ಲಾ ಪಂಚಾಯತ್ ಇಂಜಿನಿಯರ್ ಪಯಾಝ್ ಅಹ್ಮದ್, ಸುಳ್ಯ ಠಾಣಾಧಿಕಾರಿ ಸಂತೋಷ್, ಕೆ.ವಿ.ಜಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾಧರ್, ಸುಳ್ಯ ಬ್ಲಾಕ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಜಿ.ಕೆ.ಹಮೀದ್ ಗೂನಡ್ಕ ಮತ್ತಿತರರು ಉಪಸ್ಥಿತರಿದ್ದರು.ಪ್ರಧಾನ ಕಾರ್ಯದರ್ಶಿ ಅಶ್ರಫ್ ಗುಂಡಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.












