ಸುಳ್ಯ:ದ.ಕ. ಜಿಲ್ಲೆ, ಸುಳ್ಯ ತಾಲೂಕು ಸಮಾಜ ಕಲ್ಯಾಣ ಇಲಾಖೆ, ಅರಂತೋಡು ಗ್ರಾಮ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾವು ಸುಳ್ಯ ತಾಲೂಕಿನ ಅರಂತೋಡು ಗ್ರಾಮದಲ್ಲಿ ನಡೆಯಿತು. ತೆಕ್ಕಿಲ್ ಸಮುದಾಯ ಭವನದ ಬಳಿಯಿಂದ ವಿವಿಧ ಶಾಲಾ ವಿದ್ಯಾರ್ಥಿಗಳು ಹಾಗೂ
ಸಾರ್ವಜನಿಕರಿಂದ ಕಾಲ್ನಡಿಗೆ , ಚಂಡೆ ಬ್ಯಾಂಡ್ ಸೆಟ್ ನೊಂದಿಗೆ ಸಂವಿಧಾನ ಜಾಗೃತಿ ಜಾಥಾವನ್ನು ಅದ್ದೂರಿಯಾಗಿ ಬರಮಾಡಿ ಕೊಳ್ಳಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮೋಹನ್ ಕುಮಾರ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ಅಧ್ಯಕ್ಷ ಕೇಶವ ಅಡ್ತಲೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಸದಸ್ಯರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗೆ ಹಾರಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂವಿಧಾನ ಪೀಠಿಕೆ ಪಠಣ, ಸಂವಿಧಾನ ಹಾಗೂ ಸರಕಾರದ ಯೋಜನೆಗಳ ಬಗ್ಗೆ ಅರಿವು, ಇತ್ಯಾದಿ ಕಾರ್ಯಕ್ರಮ ನಡೆಯಿತು.









