ಅರಂತೋಡು: ಆರಂತೋಡು -ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಆರಂತೋಡು. ಗ್ರಾಮ ಪಂಚಾಯತ್ ಆರಂತೋಡು. ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮತ್ತು ಇನ್ನರ್ ವಿಲ್ ಕ್ಲಬ್ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ಕೃಷಿಯ ಸಮಗ್ರ ಬೆಳೆ ನಿರ್ವಹಣೆಯ ಕುರಿತು ಮಾಹಿತಿ – ಮಂಥನ ಕಾರ್ಯಕ್ರಮ ಮತ್ತು
ಉಚಿತ ನೇತ್ರ ತಪಾಸಣಾ ಶಿಬಿರದ ಕಾರ್ಯಕ್ರಮ ದಿನಾಂಕ ಆರಂತೋಡು ಸಹಕಾರಿ ಸಂಘದ “ಸಿರಿ ಸೌದ ” ಸಭಾಂಗಣದಲ್ಲಿ ನಡೆಯಿತು. ಸಹಕಾರಿ ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತ ಮೊಟ್ಟೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಆರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಆರಂತೋಡು ಸಹಕಾರಿ ಸಂಘದ ಉಪಾಧ್ಯಕ್ಷ ದಯಾನಂದ ಕುರುಂಜಿ. ಪಂಚಾಯತ್ ಉಪಾಧ್ಯಕ್ಷೆ ಭವಾನಿ ಚಿಟ್ಟನೂರು, ಇಂದೋರ್ ನ ಶ್ರೀ ಸಿದ್ದಿ ಎಗ್ರಿ ಕಂ ಪ್ರೈವೇಟ್ ಲಿಮಿಟೆಡ್ ನ ಪೆರುವೋಡಿ ನಾರಾಯಣ ಭಟ್. ಇನ್ನರ್ ವಿಲ್ ಕ್ಲಬ್ನ ಅಧ್ಯಕ್ಷೆ ಚಿಂತನಾ ಸುಬ್ರಹ್ಮಣ್ಯ, ಪ್ರಗತಿಪರ ಕೃಷಿಕರಾದ ಶ್ರೀನಿವಾಸ ನಿಡಂಜಿ, ಜೇಡ್ಲ ಶ್ರೀಧರ್ ಭಟ್, ರೋಟರಿ ಕ್ಲಬ್ ನ ಅಧ್ಯಕ್ಷೆ ಯೋಗಿತಾ ಗೋಪಿನಾಥ್ ಮತ್ತು ಪ್ರಸಾದ್ ನೇತ್ರಾಲಯದ ವೈದ್ಯರಾದ ಡಾ. ಅವನ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ಣಾಧಿಕಾರಿ ವಾಸುದೇವ ನಾಯಕ್ ಸ್ವಾಗತಿಸಿ, ನಯನಕುಮಾರ್ ಕಿರ್ಲಾಯ ವಂದಿಸಿದರು. ಆರಂತೋಡು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಎಮ್ ಆರ್ ಕಾರ್ಯಕ್ರಮ ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ಸಹಕಾರಿ ಸಂಘದ ನಿರ್ದೇಶಕರುಗಳು, ಪಂಚಾಯತ್ ಸದಸ್ಯರುಗಳು, ರೋಟರಿ ಕ್ಲಬ್ ಮತ್ತು ಇನ್ನರ್ ವೀಲ್ ಕ್ಲಬ್ ನ ಸದಸ್ಯರು ಮತ್ತು ಪದಾಧಿಕಾರಿಗಳು,ಆರಂತೋಡು -ತೊಡಿಕಾನ ಅವಳಿ ಗ್ರಾಮಗಳ ಗ್ರಾಮಸ್ಥರಲ್ಲದೆ ನೆರೆಯ ಗ್ರಾಮಗಳ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ಭಾಗವಹಿಸಿದ್ದರು. ಉದ್ಘಾಟನಾ ಸಮಾರಂಭದ ನಂತರ ಸಹಕಾರಿ ಸಂಘದ ಸಭಾಂಗಣದಲ್ಲಿ ಕೃಷಿಯ ಮಾಹಿತಿ ಕಾರ್ಯಕ್ರಮ ಮತ್ತು ಪಂಚಾಯತ್ ಸಭಾಂಗಣದಲ್ಲಿ ನೇತ್ರಾ ತಪಾಸಣಾ ಶಿಬಿರಗಳು ನಡೆಯಿತು