ಅರಂತೋಡು:ಅರಂತೋಡು ಗ್ರಾಮ ಪಂಚಾಯತ್ನ ವತಿಯಿಂದ ಪ್ರತಿ ತಿಂಗಳು ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಅಭಿಯಾನ 63 ತಿಂಗಳು ಪೂರ್ತಿಗೊಂಡಿದೆ. ಪ್ರತಿ ತಿಂಗಳ ಕೊನೆಯ ಭಾನುವಾರ ನಡೆಯುತ್ತಿರುವ ಹೆದ್ದಾರಿ ಸ್ವಚ್ಛತಾ ಅಭಿಯಾನ ನಿರಂತರ 5 ವರ್ಷ ಹಾಗೂ 3 ತಿಂಗಳಿನಿಂದ ನಡೆಯುತಿದೆ. ಅ.25 ರಂದು ಅರಂತೋಡು ಪೇಟೆಯಲ್ಲಿ
ಸ್ವಚ್ಛತಾ ಅಭಿಯಾನ ನಡೆಯಿತು. ಸ್ವಚ್ಛತಾ ಅಭಿಯಾನದಲ್ಲಿ ಆರಂತೋಡು -ತೋಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆರಂತೋಡು ಇದರ ಆಡಳಿತ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಣಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು,ಸಂಘ -ಸಂಸ್ಥೆಗಳ ಪ್ರತಿನಿಧಿಗಳು ಆರಂತೋಡು ಪರಿಸರದ ನಾಗರಿಕ ಬಂಧುಗಳು ಹಾಗೂ ಸ್ವಚ್ಛತಾ ಘಟಕದ ಸಿಬ್ಬಂದಿ ವರ್ಗದವರು ಪಾಲ್ಗೊಂಡರು.
ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ, ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ಪಂಚಾಯತ್ ಸದಸ್ಯರು, ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಉಪಾಧ್ಯಕ್ಷ ದಯಾನಂದ ಕುರುಂಜಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್ ಮತ್ತಿತರರು ಭಾಗವಹಿಸಿದ್ದರು.
ಪ್ರತಿ ತಿಂಗಳ ಸ್ವಚ್ಛತಾ ಅಭಿಯಾನದಲ್ಲಿ ವಿವಿಧ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಭಾಗವಹಿಸುತ್ತಾರೆ. ಹೆದ್ದಾರಿ ಬದಿ, ಅಂಗಡಿ ಮುಂಗಟ್ಟುಗಳ ಮುಂಭಾಗ, ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಮಾಡುತ್ತಾರೆ