ಸುಳ್ಯ:ದಶಕಗಳ ಬೇಡಿಕೆ, ಹಲವಾರು ವರ್ಷಗಳಿಂದ ನೆನೆಗುದಿಗೆ ಬೆದ್ದಿರುವ ಆರಂತೋಡು -ತೊಡಿಕಾನ -ಪಟ್ಟಿ – ಭಾಗಮಂಡಲ ರಸ್ತೆ ಅಭಿವೃದ್ಧಿ ಪಡಿಸುವಂತೆ ಕೋರಿ ತೊಡಿಕಾನ ಗ್ರಾಮಸ್ಥರ ಪರವಾಗಿ ಆರಂತೋಡು -ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮನವಿ ಸಲ್ಲಿಸಿದರು. ಈ ರಸ್ತೆಯ ಅಭಿವೃದ್ಧಿಯ
ಅಗತ್ಯತೆ ಮತ್ತು ಅಭಿವೃದ್ಧಿಯ ಪಡಿಸುವಲ್ಲಿ ಉಂಟಾಗಿರುವ ತೊಡಕುಗಳ ಬಗ್ಗೆ ಸಂತೋಷ್ ಕುತ್ತಮೊಟ್ಟೆ ಸಂಸದರಿಗೆ ವಿವರಿಸಿದರು. ಮನವಿಯನ್ನು ಸ್ವೀಕರಿಸಿದ ಸಂಸದರು, ಲೋಕೋಪಯೋಗಿ ಇಲಾಖೆ ಅರಣ್ಯ ಇಲಾಖೆ,ಮೈಸೂರಿನ ಸಂಸದರು,ಸುಳ್ಯ ಶಾಸಕರು ಮತ್ತು ಕೊಡಗಿನ ಶಾಸಕರುಗಳ ಜಂಟಿ ಸಭೆಯನ್ನು ಕರೆದು ಅಧಿಕಾರಿಗಳಿಂದ ಮಾಹಿತಿ ಪಡೆದು, ಉಂಟಾಗಿರುವ ತೊಡಕುಗಳ ಬಗ್ಗೆ ಚರ್ಚಿಸಿ ರಸ್ತೆ ಅಭಿವೃದ್ಧಿ ಪಡೆಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಆರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ, ಸಹಕಾರಿ ಸಂಘದ ಉಪಾಧ್ಯಕ್ಷ ದಯಾನಂದ ಕುರುಂಜಿ, ಗ್ರಾಮ ಪಂಚಾಯತ್ ಸದಸ್ಯ ವೆಂಕಟ್ರಮಣ ಪೆತ್ತಾಜೆ ಮೊದಲಾದವರು ಉಪಸ್ಥಿತರಿದ್ದರು.