ಅರಂತೋಡು:ಅರಂತೋಡು ಗ್ರಾಮ ಪಂಚಾಯತ್ನ ಘನತ್ಯಾಜ್ಯ ಘಟಕದ ನಿರ್ಮಾಣಕ್ಕೆ ಮತ್ತು ಅದಕ್ಕೆ ಸಂಪರ್ಕಿಸುವ ಉದಯನಗರ- ಕೊಡಂಕೇರಿ ರಸ್ತೆಯ ಕಾಂಕ್ರಿಟೀಕರಣಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಗುದ್ದಲಿ ಪೂಜೆ ನೆರವೇರಿಸಿದರು.ಬೆಂಕಿ ಅವಘಡಕ್ಕೆ ತುತ್ತಾಗಿ ಇತ್ತೀಚೆಗೆ ತ್ಯಾಜ್ಯ ನಿರ್ವಹಣಾ ಘಟಕ
ನಾಶವಾಗಿತ್ತು. ಕಂದಾಯ ಕಚೇರಿಯನ್ನು ಗ್ರಾಮ ಪಂಚಾಯತ್ ಹಳೆ ಸಭಾ ಭವನಕ್ಕೆ ಸ್ಥಳಾಂತರಿಸಿ ನೂತನ ಕಚೇರಿಯನ್ನು ಶಾಸಕಿ ಭಾಗೀರಥಿ ಉದ್ಘಾಟನೆ ಮಾಡಿದರು. ನಿವೃತ್ತ ಪ್ರಾಂಶುಪಾಲ ಕೆ.ಆರ್.ಗಂಗಾಧರ, ಕಾರ್ಮಿಕ ಕನಿಷ್ಠ ವೇತನ ನಿಗಮ ಅಧ್ಯಕ್ಷರಾದ ಟಿ.ಎಂ.ಶಾಹೀದ್, ಫಾರೆಸ್ಟರ್ ಸೀತಾರಾಮ, ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಅವರನ್ನು ಸನ್ಮಾನಿಸಲಾಯಿತು. ತಹಶೀಲ್ದಾರ್ ಮಂಜುಳಾ, ಇ.ಒ.ರಾಜಣ್ಣ ಅತಿಥಿಯಾಗಿದ್ದರು.ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ವಹಿಸಿದ್ದರು. ಉದ್ಯೋಗ ಖಾತರಿ ಅಧಿಕಾರಿ ಸುಧಾಮ ಕೃಷ್ಣ ಮಾತನಾಡಿದರು. ಗ್ರಾ.ಪಂ.ಉಪಾಧ್ಯಕ್ಷೆ ಭವಾನಿ ಚಿಟ್ಟನ್ನೂರು ಸ್ವಾಗತಿಸಿ, ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ವಂದಿಸಿದರು.













