ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಜು. 9ರಂದು ಬೆಳ್ತಂಗಡಿ ತಾಲೂಕಿನ ಪುರುಷರ ಮಜಲು ಪರಿಸರದಲ್ಲಿ ತಣ್ಣೀರುಪಂಥ ಮೀಸಲು ಅರಣ್ಯ ಪ್ರದೇಶದಲ್ಲಿ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ
ನಡೆಯಿತು.ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಭಾಗವಹಿಸಿದ್ದರು.ಮಂಗಳೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕರಿಕಾಲನ್ ಮತ್ತು ಉಪರಣ್ಯ ಸಂರಕ್ಷಣಾಧಿಕಾರಿ ಡಾ. ದಿನೇಶ್ ಕುಮಾರ್, ವೈ.ಕೆ. ಸಸಿಗಳನ್ನು ವಿತರಿಸಿದರು.
ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಸ್ವಾಗತಿಸಿದರು. ಯೋಜನಾ ನಿರ್ದೇಶಕ ಅನಿಲ್ ಕುಮಾರ್, ಕಾಸಿಂ ಮಲ್ಲಿಗೆಮನೆ, ಪ್ರಭಾಕರ ಗೌಡ ಪೋಸಂದೋಡಿ, ವಿವೇಕ್ ವಿನ್ಸಂಟ್ ಪಾಯಿಸ್, ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.
ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಈ ವರ್ಷ ಹತ್ತು ಲಕ್ಷಕ್ಕೂ ಮಿಕ್ಕಿ ಸಸಿಗಳನ್ನು ನಾಟಿ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತಣ್ಣೀರುಪಂಥ ಮೀಸಲು ಅರಣ್ಯ ಪ್ರದೇಶದಲ್ಲಿ 4500 ಗಿಡಗಳನ್ನು ನಾಟಿ ಮಾಡಲಾಯಿತು.