ಸುಳ್ಯ:ಸಮಾಜದ ಸಮಗ್ರ ಅಭಿವೃದ್ಧಿಗೆ ಪುರುಷರು ಮತ್ತು ಮಹಿಳೆಯರು ಒಟ್ಟಾಗಿ ಕೈ ಜೋಡಿಸಬೇಕು ಎಂದು ಖ್ಯಾತ ಚಲನಚಿತ್ರ ನಟ ಅರವಿಂದ್ ಬೋಳಾರ್ ಅಭಿಪ್ರಾಯಪಟ್ಟಿದ್ದಾರೆ.ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ನಡೆದ ಇಂಟರ್ ನ್ಯಾಷನಲ್ ಮೆನ್ಸ್ ಡೇ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನೆರೆದ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿದ ಅವರು ಹೃದಯದಲ್ಲಿ
ಪ್ರೀತಿ, ಮುಖದಲ್ಲಿ ನಗು ಇರಲಿ, ಸಂತಸ, ಸಂಭ್ರಮ, ಸಮಾನತೆ ಪ್ರತಿ ದಿನಾಚರಣೆಯ ಹಿಂದಿನ ಸಂದೇಶ ಎಂದು ಅಭಿಪ್ರಾಯಪಟ್ಟರು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಅಧ್ಯಕ್ಷ ಡಾ ಕೆ.ವಿ ಚಿದಾನಂದ ಅಧ್ಯಕ್ಷತೆ ವಹಿಸಿದ್ದರು.ಪುರುಷರ ದಿನಾಚರಣೆಯ ಪ್ರಯುಕ್ತ ಓ.ಬಿ.ಜಿ ವಿಭಾಗದ ಪ್ರೊ. ಡಾ ರವಿಕಾಂತ್ ಜಿ.ಒ ಪುರುಷರ ಆರೋಗ್ಯದ ಮಹತ್ವದ ಕುರಿತು ಉಪನ್ಯಾಸ ನೀಡಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಉಪಾಧ್ಯಕ್ಷೆ ಶೋಭಾ ಚಿದಾನಂದ, ಕಾಲೇಜಿನ ಡೀನ್ ಡಾ.ನೀಲಾಂಬಿಕೈ ನಟರಾಜನ್,
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾಧರ್ ಡಿ.ವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಗೌರವ ಪ್ರಾಧ್ಯಪಕರಾದ ಶೀಲಾ ಜಿ ನಾಯಕ್, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಕೌನ್ಸಿಲ್ ಮೆಂಬರ್ ಜಗದೀಶ್ ಅಡ್ತಲೆ, ಕೆವಿಜಿ ಕಾನೂನು ಮಹಾವಿದ್ಯಾಲಯ ಆಡಳಿತಾಧಿಕಾರಿ ಪ್ರೊ.ಕೆ. ವಿ ದಾಮೋಧರ ಗೌಡ, ಕೆವಿಜಿ ಮೆಡಿಕಲ್ ಕಾಲೇಜಿನ ರಿಜಿಸ್ಟ್ರಾರ್ ಡಾ ಸಂದೇಶ್, ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲ ಡಾ ರುದ್ರ ಕುಮಾರ್ ಎಂ.ಎಂ, ಎನ್.ಎಂಪಿ.ಯು.ಸಿ ಪ್ರಾಂಶುಪಾಲರು ಮಿಥಾಲಿ ಪಿ ರೈ ಕೆವಿಜಿ ಕಾನೂನು ಕಾಲೇಜಿನ ಪ್ರಾಂಶುಪಾಲರು ಟೀನಾ ಎಚ್.ಎಸ್, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ಬ ಪ್ರಾಂಶುಪಾಲರು ಡಾ. ಪ್ರಮೋದ್ ಕೆ.ಜೆ, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಪ್ರಾಂಶುಪಾಲೆ ಚಂದ್ರಾವತಿ ಉಪಸ್ಥಿತರಿದ್ದರು. ಜಿಷ್ಣು ಅವರಿಂದ ಶಾಸ್ತ್ರೀಯ ನೃತ್ಯ ಪ್ರದರ್ಶನ ನಡೆಯಿತು. ಪವನ್ ಕೊಲ್ಚಾರ್ ಪ್ರಾರ್ಥಿಸಿದರು. ಡಾ ಲೀಲಾಧರ್ ಡಿ.ವಿ ಪ್ರಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು, ವಿನಯ್ ಬೆದ್ರುಪಣೆ ಮುಖ್ಯ ಅತಿಥಿಗಳ ಪರಿಚಯ ವಾಚಿಸಿದರು, ತೀರ್ಥೇಶ್ ಪಾರೆಪ್ಪಾಡಿ ಧನ್ಯವಾದಗೈದರು. ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಚೀಫ್ ಹೆಚ್.ಆರ್ ಮ್ಯಾನೇಜರ್ ಶಿವಪ್ರಸಾದ್ ಕೆ ಹಾಗೂ ಶಶಿಕುಮಾರ್ ಕಾರ್ಯಕ್ರಮ ನಿರೂಪಿಸಿದರು.












