ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಅವರನ್ನು ಇಡಿ ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಈ ಕುರಿತಂತೆ ಪ್ರತಿಕ್ರಿಯಿಸಿರುವ ದೆಹಲಿ ಸಚಿವೆ ಅತಿಶಿ, ಅರವಿಂದ ಕೇಜ್ರಿವಾಲ್ ಅವರನ್ನು ಇ.ಡಿ ಅಧಿಕಾರಿಗಳು ಬಂಧಿಸಿದ್ದಾರೆ ಎಂಬ
ಸುದ್ದಿ ಬಂದಿದೆ. ಅವರು ದೆಹಲಿ ಸಿಎಂ ಆಗಿಯೇ ಇರಲಿದ್ದಾರೆ. ನಾವು ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣ ದಾಖಲಿಸಿದ್ದೇವೆ. ನಮ್ಮ ವಕೀಲರು ಸುಪ್ರೀಂ ಕೋರ್ಟ್ಗೆ ತೆರಳುತ್ತಿದ್ದಾರೆ. ಇಂದು ರಾತ್ರಿಯೇ ತುರ್ತು ವಿಚಾರಣೆಗೆ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಜಾರಿ ನಿರ್ದೆಶನಾಲಯದ(ಇ.ಡಿ) ಅಧಿಕಾರಿಗಳು ಸಂಜೆ ಕೇಜ್ರಿವಾಲ್ ನಿವಾಸಕ್ಕೆ ತೆರಳಿದ್ದರು.ಇ.ಡಿ ತಂಡವು ಸಮನ್ಸ್ ನೀಡಲು ಅವರ ಮನೆಗೆ ತೆರಳಿದೆ ಎಂದು ವರದಿಯಾಗಿತ್ತು.ಪ್ರಕರಣದಲ್ಲಿ ಹಲವು ಬಾರಿ ಇ.ಡಿ ನೀಡಿರುವ ಸಮನ್ಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗಲಿಲ್ಲ.









