ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ದೆಹಲಿ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದೆ. ಅರ್ಜಿಯ ಕುರಿತು
ಆರೋಪಿ ಮತ್ತು ಜಾರಿ ನಿರ್ದೇಶನಾಲಯದ (ಇ.ಡಿ) ವಾದ ಹಾಗೂ ಪ್ರತಿವಾದ ಆಲಿಸಿದ ನಂತರ ವಿಶೇಷ ನ್ಯಾಯಾಲಯ ಆದೇಶ ಪ್ರಕಟಿಸಿದೆ. ಮಾ. 22ರಂದು ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿತ್ತು. ಬಳಿಕ ಲೋಕಸಭಾ ಚುನಾವಣಟ ಪ್ರಚಾರಕ್ಕೆ ಕೆಲವು ದಿನ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು.