ನವದೆಹಲಿ: ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ಬಂಧಿತರಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ 6 ದಿನಗಳ ಕಾಲ ಜಾರಿ ನಿರ್ದೇಶನಾಲಯದ (ಇಡಿ) ಕಸ್ಟಡಿಗೆ ಒಪ್ಪಿಸಿದೆ. ಕೇಜ್ರಿವಾಲ್ ಅವರನ್ನು
ವಿಚಾರಣೆ ನಡೆಸಬೇಕಿರುವ ಕಾರಣ 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಇಡಿ ಕೋರ್ಟ್ಗೆ ಮನವಿ ಮಾಡಿತ್ತು. ಈ ಕುರಿತಾಗಿ ಶುಕ್ರವಾರ ಇಡೀ ದಿನ ವಿಚಾರಣೆ ನಡೆಸಿದ ಕೋರ್ಟ್ ಕೊನೆಗೆ ಮಾರ್ಚ್ 28ರವರೆಗೆ ಕಸ್ಟಡಿಗೆ ನೀಡಲು ಒಪ್ಪಿಕೊಂಡಿದೆ. ಏಜೆನ್ಸಿ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರು 10 ದಿನಗಳ ಕಸ್ಟಡಿಗೆ ಕೋರಿದ್ದರು. ಅವರನ್ನು ವಿಚಾರಣೆ ಮಾಡುವ ಅಗತ್ಯವಿದೆ ಎಂದು ವಾದಿಸಿದ್ದರು.





