ಸುಳ್ಯ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಫೆ. 28 ರಂದು ಮಡಿಕೇರಿ ಗೌಡ ಸಮಾಜ ಭವನದಲ್ಲಿ ನಡೆಯುವ 2022 – 23 ನೇ ಸಾಲಿನ ಗೌರವ ಪ್ರಶಸ್ತಿ ಪ್ರಧಾನ,ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಇಂದು ಸುಳ್ಯ ಮೊಗರ್ಪಣೆ ಬಳಿಯ ನಿವೃತ ಬಿ ಡಿ ಓ ಮೀನಾಕ್ಷಿ ಗೌಡ ಅವರ ನಿವಾಸದಲ್ಲಿ ನಡೆಯಿತು. ಮೀನಾಕ್ಷಿ ಗೌಡ ಅವರು ಆಮಂತ್ರಣ ಪತ್ರ
ಬಿಡುಗಡೆ ಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಈ ಸಂಧರ್ಭದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿ ಅರೆಭಾಷೆ ಅಕಾಡೆಮಿಯ ಪ್ರತಿಷ್ಠಿತ ಕಾರ್ಯಕ್ರಮ ಇದಾಗಿದ್ದು ಫೆ.28 ರಂದು ಕಾರ್ಯಕ್ರಮ ನಡೆಯಲಿದೆ. ಹಲವಾರು ಯುವಕರನ್ನು ಬೆಳೆಸಿದ, ಸುಳ್ಯಕ್ಕೆ ಕನ್ನಡಭವನ ನಿರ್ಮಾಣಕ್ಕೆ ಕಾರಣಕರ್ತರಾದ ಎಂ.ಮೀನಾಕ್ಷಿ ಗೌಡ ಅವರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿರುವುದು ಸಂತಸದ ವಿಷಯ ಎಂದು ಹೇಳಿದರು.
ಅರೆಭಾಷೆ ಅಕಾಡೆಮಿ ಸದಸ್ಯರಾದ ಚಂದ್ರಶೇಖರ ಪೆರಾಲು,ಡಾ ಎನ್ ಎ ಜ್ಞಾನೇಶ್, ಚಂದ್ರಾವತಿ ಬಡ್ಡಡ್ಕ,
ಲತಾ ಕುತ್ಪಾಜೆ, ವೆಂಕಟರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಟಿ ವಿಶ್ವನಾಥ್, ವ್ಯವಸ್ಥಾಪಕರಾದ ಚಂದ್ರಶೇಖರ ಮೇರ್ಕಜೆ ಉಪಸ್ಥಿತರಿದ್ದರು.
ಡಾ. ಜ್ಞಾನೇಶ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ಚಂದ್ರಶೇಖರ ಪೇರಾಲು ವಂದಿಸಿದರು.
ಈ ಸಂಧರ್ಭದಲ್ಲಿ ಅರೆಭಾಷೆ ಅಕಾಡಮಿ ವತಿಯಿಂದ ನಿವೃತ ಬಿ ಡಿ ಓ ಮೀನಾಕ್ಷಿ ಗೌಡ ರವರನ್ನು ಗೌರವಿಸಿ ಸನ್ಮಾನಿಸಲಾಯಿತು.