ಸುಳ್ಯ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರು ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ. ಜಯರಾಮ ಅವರನ್ನು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾದ ಸದಾನಂದ ಮಾವಜಿ ಹಾಗೂ ಸದಸ್ಯರು ಭೇಟಿ ಮಾಡಿ ಮಾತುಕತೆ ನಡೆಸಿದರು. ಅವರ ಮನೆಯಲ್ಲಿ
ಭೇಟಿ ನೀಡಿ ಮಾತುಕತೆ ನಡೆಸಿದ ನೂತನ ಅಧ್ಯಕ್ಷರು ಹಾಗೂ ಸದಸ್ಯರ ತಂಡಕ್ಕೆ ಪಿ.ಸಿ. ಜಯರಾಮ ಶುಭ ಹಾರೈಸಿದರು. ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯಕ್ಕಾಗಿ ಉತ್ತಮ ಕೆಲಸ ಕಾರ್ಯಗಳು ಮೂಡಿ ಬರಲಿ ಹೇಳಿದರು.
ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾದ ಸದಾನಂದ ಮಾವಜಿ, ಸದಸ್ಯರಾದ ಚಂದ್ರಶೇಖರ್ ಪೇರಾಲು, ತೇಜಕುಮಾರ್ ಕುಡೇಕಲ್ಲು, ಚಂದ್ರಾವತಿ ಬಡ್ಡಡ್ಕ, ಲತಾ ಕುದ್ಪಾಜೆ, ಡಾ.ಎನ್.ಎ ಜ್ಞಾನೇಶ್ ಉಪಸ್ಥಿತರಿದ್ದರು.
ಪಿ.ಸಿ. ಜಯರಾಮ್ ಹಾಗೂ ಅವರ ಪತ್ನಿ ಮಡಪ್ಪಾಡಿ ಗ್ರಾಮಪಂಚಾಯತ್ ಅಧ್ಯಕ್ಷೆ ಉಷಾ ಜಯರಾಮ್, ಪುತ್ರಿ ಸ್ಪಂದನಾ ಇವರನ್ನೊಳಗೊಂಡ ಕುಟುಂಬವು ನೂತನ ಸದಸ್ಯರನ್ನು ಬರಮಾಡಿಕೊಂಡು, ಶುಭ ಹಾರೈಸಿದರು.