ಬೆಂಗಳೂರು:ಅರೆಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ಕೆಲಸ ಅಕಾಡೆಮಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ 2024ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಗೌರವ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
ಅತ್ಯಂತ ಸಂತೋಷದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ ಎಂದು ಹೇಳಿದ ಅವರು ಅರೆಭಾಷೆಯು
ಒಂದು ವಿಭಿನ್ನ ಭಾಷೆ ಮತ್ತು ಸಂಸ್ಕೃತಿ. ನಮ್ಮಲ್ಲಿ 230ಕ್ಕೂ ಹೆಚ್ಚು ಸಣ್ಣ ಭಾಷೆಗಳಿವೆ. ಇವೆಲ್ಲವೂ ಕನ್ನಡ ಭಾಷೆಯಿಂದಲೇ ಆಗಿದೆ. ಈ ಭಾಷೆಗಳು ಕನ್ನಡದ ಅಸ್ಮಿತೆ ಎಂದು ಹೇಳಿದರು.ನ.30 ಭಾನುವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ಕೆ.ಆರ್.ಗಂಗಾಧರ, ಡಾ.ಯು.ಪಿ.ಶಿವಾನಂದ, ದಂಬೆಕೋಡಿ ಸುಬ್ರಾಯ ಆನಂದ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೌರವ ಪ್ರಶಸ್ತಿ ಪ್ರದಾನ ಮಾಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ’ ಭಾಷೆ ಮತ್ತು ಸಂಸ್ಕೃತಿಯೇ ನಮ್ಮ ದೊಡ್ಡ ಆಸ್ತಿ ಎಂದು ಅಭಿಪ್ರಾಯಪಟ್ಟರು.ಇತಿಹಾಸ ತಿಳಿಯದವರು ಇತಿಹಾಸ ರಚಿಸಲು ಸಾಧ್ಯವಿಲ್ಲ, ಮಾತೃಭಾಷೆ ಮರೆತರೆ ಸಂಸ್ಕೃತಿ ಉಳಿಸಲು ಸಾಧ್ಯವಿಲ್ಲ ಎಂದರು.ಆದುದರಿಂದ ಇತಿಹಾಸ ಮತ್ತು ಸಂಸ್ಕೃತಿಯನ್ನು ಉಳಿಸಲು ಪ್ರತಿಯೊಬ್ಬರೂ ಕಠಿ ಬದ್ಧರಾಗಬೇಕು ಎಂದು ಹೇಳಿದರು.
ಸ್ಪೀಕರ್ ಯು.ಟಿ.ಖಾದರ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ,ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ,ಮುಖ್ಯ ಅತಿಥಿಗಳಾಗಿದ್ದರು.

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ
ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಟಿ.ಎಚ್.ಎಂ. ಕುಮಾರ್, ನಿರ್ದೇಶಕಿ ಕೆ.ಎಂ
ಗಾಯತ್ರಿ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ, ಉಪಾಧ್ಯಕ್ಷ ತೇನನ ರಾಜೇಶ್ ಮತ್ತಿತರರು ಭಾಗವಹಿಸಿದ್ದರು.

ಅಕಾಡೆಮಿ ಸದಸ್ಯರಾದ ಚಂದ್ರಶೇಖರ್ ಪೇರಾಲು, ತೇಜಕುಮಾರ್ ಕುಡೆಕಲ್ಲು,ಡಾ.ಎನ್.ಎ. ಜ್ಞಾನೇಶ್, ಚಂದ್ರಾವತಿ ಬಡ್ಡಡ್ಕ,
ಲತಾ ಪ್ರಸಾದ್ ಕುದ್ಪಾಜೆ, ಪಿ.ಎಸ್.ಕಾರ್ಯಪ್ಪ, ಸೂದನ ಎಸ್. ಈರಪ್ಪ, ಲೋಕೇಶ್ ಊರುಬೈಲು, ಗೋಪಾಲ ಪೆರಾಜೆ, ಪಿ.ಎಂ.ಸಂದೀಪ್, ವಿನೋದ್ ಮೂಡಗದ್ದೆ,ಮೋಹನ್ ಪೊನ್ನಚನ, ಕುದುಪಜೆ ಕೆ. ಪ್ರಕಾಶ್, ಅಕಾಡೆಮಿಯ ರಿಜಿಸ್ಟರ್ ಚಿನ್ನಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.
ಅಕಾಡೆಮಿ ಸದಸ್ಯ ಡಾ.ಎನ್.ಎ.ಜ್ಞಾನೇಶ್ ಸ್ವಾಗತಿಸಿದರು.













