ಮಂಗಳೂರು: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ಮಾರ್ಚ್ 14ರಂದು ಮಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆಸಲುದ್ದೇಶಿಸಿರುವ 2025ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ, ಅಕಾಡೆಮಿ ಪ್ರಕಟಿತ
ಪುಸ್ತಕ ಬಿಡುಗಡೆ ಹಾಗೂ ವಾದ್ಯ ಪರಿಕರಗಳ ವಿತರಣಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಮಂಗಳೂರಿನ ಉರ್ವಾಸ್ಟೋರ್ನಲ್ಲಿರುವ ತುಳುಭವನದಲ್ಲಿ ಫೆ. 20ರಂದು ನಡೆಯಿತು.
ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಗೌಡ ಸಮಾಜ, ಅರೆಭಾಷೆ ಸಂಘಟನೆಗಳ ಮುಖ್ಯಸ್ಥರು, ಅಕಾಡೆಮಿಯ ಹಾಲಿ ಹಾಗೂ ಮಾಜಿ ಸದಸ್ಯರುಗಳು ಭಾಗವಹಿಸಿದ್ದರು.






