ಮಡಿಕೇರಿ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆಯಲ್ಲಿ ಉತ್ತಮ ಸಾಹಿತ್ಯ, ಸಂಗೀತ, ನಾಟಕ, ಜನಪದ ಕಲಾ ಪ್ರಕಾರಗಳಿಗಾಗಿ ಒಂದೇ ವೇದಿಕೆಯಲ್ಲಿ ಎಲ್ಲರನ್ನೂ ಸೇರಿಸಿ
ಸಾಹಿತ್ಯ, ಸಂಸ್ಕೃತಿಯನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಆಗಸ್ಟ್ 10 ರಂದು ಬೆಳಗ್ಗೆ 10 ಗಂಟೆಗೆ ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮದುವೆಗದ್ದೆ ಬೋಜಪ್ಪ ಗೌಡ ಸಭಾಂಗಣದಲ್ಲಿ ಸಾಹಿತಿಗಳು, ಬರಹಗಾರರು ಮತ್ತು ಕಲಾವಿದರೊಂದಿಗೆ ‘ಸಂವಾದ ಕಾರ್ಯಕ್ರಮ’ ಜರುಗಲಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅದ್ಯಕ್ಷರಾದ ಸದಾನಂದ ಮಾವಜಿ ಅವರು ತಿಳಿಸಿದ್ದಾರೆ.