ಮಡಿಕೇರಿ:ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿಯ ನೂತನ ಅಧ್ಯಕ್ಷರಾದ ಸದಾನಂದ ಮಾವಜಿ ಅವರನ್ನು ಭೇಟಿಯಾಗಿ ಗೌರವಿಸಿ
ಅಭಿನಂದಿಸಲಾಯಿತು. ಈ ಸಂದರ್ಭ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ಕೋಶಾಧಿಕಾರಿ ಸಿದ್ದರಾಜು ಬೆಳ್ಳಯ್ಯ ಸಂಘಟನಾ ಕಾರ್ಯದರ್ಶಿ ಚೊಕ್ಕಾಡಿ ಪ್ರೇಮ ರಾಘವಯ್ಯ ಸದಸ್ಯರಾದ ಗುಡ್ಡೇರ ಲಕ್ಸು ಸೋಮಣ್ಣ, ಪೊಡನೊಳನ ಪವಿತ್ರ ಗಿರೀಶ್ ಅಕಾಡೆಮಿಯ ನೂತನ ಸದಸ್ಯರಾದ ಲೋಕೇಶ್ ಊರುಬೈಲು ಪಿ ಎಂ ಸಂದೀಪ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ್ ಸೇರಿದಂತೆ ಪ್ರಮುಖರು ಹಾಜರಿದ್ದರು.