ಬೆಂಗಳೂರು:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಹಾಗೂ ಅಕಾಡೆಮಿಯ ಸದಸ್ಯರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಅರೆಭಾಷೆ ಅಕಾಡೆಮಿಯ ನೂತನ ಸದಸ್ಯರಾದ
ಚಂದ್ರಶೇಖರ ಪೇರಾಲು, ಡಾ.ಎನ್.ಎ.ಜ್ಞಾನೇಶ್, ಪಿ.ಎಸ್.ಕಾರ್ಯಪ್ಪ, ಚಂದ್ರಾವತಿ ಬಡ್ಡಡ್ಕ, ಲತಾ ಕುದ್ಪಾಜೆ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಗೆ ಬರುವ ನೂತನವಾಗಿ ನೇಮಕಗೊಂಡ ವಿವಿಧ ಅಕಾಡೆಮಿ, ಪ್ರಾಧಿಕಾರಿಗಳ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಅವರು ಕರೆದ ಸಮಾಲೋಚನೆ ಸಭೆಗೆ ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಪೊನ್ನಣ್ಣ ಅವರನ್ನು ಭೇಟಿ ಮಾಡಲಾಯಿತು.