ಬಂಟ್ವಾಳ: ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಮತ್ತು ಬೆಳವಣಿಗೆಗೆ ಪೂರಕ, ಬಹುಸಂಸ್ಕೃತಿ ಮತ್ತು ಸೌಹಾರ್ದತೆಯೇ ನಮ್ಮ ಅಸ್ಮಿತೆ ಎಂದು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ನುಡಿದರು.ಅರೆಭಾಷೆ ಅಕಾಡೆಮಿಯ ಸಹಯೋಗದೊಂದಿಗೆ ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಬಂಟ್ವಾಳ ಇದರ ಆಶ್ರಯದಲ್ಲಿ ನಡೆದ
ಅರೆಭಾಷೆ ಸಾಂಸ್ಕೃತಿಕ ಸಂಭ್ರಮ – 2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರೆಭಾಷೆ ಸಾಂಸ್ಕೃತಿಕ ಸಂಭ್ರಮದ ಅಧ್ಯಕ್ಷ ಉಮೇಶ್ ಕುಮಾರ್ ವೈ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಬಂಟ್ವಾಳ, ಚಿಣ್ಣರಲೋಕ ಸೇವಾ ಬಂಧು ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಆರು ದಿನಗಳ ಕಾಲ ಹಮ್ಮಿಕೊಂಡ ಕರಾವಳಿ ಕಲೋತ್ಸವ – 2026 ಪ್ರಯುಕ್ತ ತುಳು, ಕೊಂಕಣಿ, ಬ್ಯಾರಿ ಹಾಗೂ ಅರೆಭಾಷೆ ಅಕಾಡೆಮಿಗಳ ಸಹಯೋಗದೊಂದಿಗೆ ಬಹುಸಂಸ್ಕೃತಿ ಉತ್ಸವ ಮತ್ತು ಆಹಾರ ಮೇಳದ ಪ್ರಯುಕ್ತ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸಹಯೋಗದೊಂದಿಗೆ ಅರೆಭಾಷೆ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ಬಿ.ಸಿ. ರೋಡಿನಲ್ಲಿರುವ ಸ್ಪರ್ಶ ಕಲಾಮಂದಿರದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಬಿ.ಸಿ. ರೋಡಿನ ವಕೀಲರಾದ ಅಶ್ವನಿ ಕುಮಾರ್ ರೈ, ಪುತ್ತೂರು ಒಕ್ಕಲಿಗರ ಗೌಡ ಸೇವಾಸಂಘದ ಅಧ್ಯಕ್ಷ ಕೆ. ಸುಂದರ ಗೌಡ ನಡುಬೈಲು, ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಸಿ. ಕುಶಾಲಪ್ಪ ಗೌಡ, ಅನಂತಾಡಿ, ವಲಯ ಒಕ್ಕಲಿಗರ ಯಾನೆ ಗೌಡರ ಸಂಘದ ಅಧ್ಯಕ್ಷ ಪುರಂದರ ಗೌಡ, ಲಿಂಗಪ್ಪ ಗೌಡ ಅಳಿಕೆ ಹಾಗೂ ಅರೆಭಾಷೆ ಅಕಾಡೆಮಿ ಸದಸ್ಯರಾದ ಡಾ. ಜ್ಞಾನೇಶ್ ಎನ್.ಎ, ಚಂದ್ರಾವತಿ ಬಡ್ಡಡ್ಕ, ಲತಾಪ್ರಸಾದ್ ಕುದ್ಪಾಜೆ, ಕಾರ್ಯಪ್ಪ ಪಿ.ಎಸ್ ಉಪಸ್ಥಿತರಿದ್ದರು.
ತೇವು ತಾರನಾಥ ಕೊಟ್ಟಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅರೆಭಾಷೆ ಅಕಾಡೆಮಿ ಸದಸ್ಯರಾದ ಡಾ. ಜ್ಞಾನೇಶ್ ಎನ್.ಎ ಸ್ವಾಗತಿಸಿದರು. ಧರ್ಮಾವತಿ ಪಿ.ಬಿ ವಂದಿಸಿದರು. ಪೂಜಾಶ್ರೀ ವಿತೇಶ್ ಕೋಡಿ ಕಾರ್ಯಕ್ರಮ ನಿರೂಪಿಸಿದರು.
ಕವಿಗೋಷ್ಠಿ: ಸಭಾ ಕಾರ್ಯಕ್ರಮದ ಬಳಿಕ ಶ್ರೀ ಯಶವಂತ ಕುಡೇಕಲ್ಲು ಇವರ ಅಧ್ಯಕ್ಷತೆಯಲ್ಲಿ ಅರೆಭಾಷೆ ಕವಿಗೋಷ್ಠಿ ನಡೆಯಿತು. ಕವಿಗಳಾದ ಉದಯ ಭಾಸ್ಕರ್ ಸುಳ್ಯ, ಕುಸುಮಾಕರ ಅಂಬೆಕಲ್ಲು, ಜೀವನ್ ಪುರ ಮರ್ಕಂಜ, ಚಂದ್ರಾವತಿ ಬಡ್ಡಡ್ಕ, ಹೇಮಲತಾ ಕಜೆಗದ್ದೆ ಹಾಗೂ ಡಾ. ತಾರಾ ಗಣೇಶ್ ಇವರುಗಳು ಕವನ ವಾಚಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮ:
ನಂತರ ನಡೆದ ಅರೆಭಾಷೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.ರಮೇಶ್ ಮೆಟ್ಟಿನಡ್ಕ ಇವರು ಅರೆಭಾಷೆ ಹಾಡುಗಳನ್ನು ಸುಶ್ರಾವ್ಯವಾಗಿ ಹಾಡಿದರು. ಪುತ್ತೂರಿನ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ ಅರೆಭಾಷೆ ನೃತ್ಯರೂಪಕ ಕೆರೆಗೆ ದಾನ ಪ್ರಸ್ತುತಪಡಿಸಿದರು. ಸ್ವರ ಬೆಟ್ಟಂಪಾಡಿ ತಂಡದಿಂದ ಅರೆಭಾಷೆ ಹಾಡಿಗೆ ನೃತ್ಯ, ಸಿದ್ಧವೇಶ ತಂಡ ಪೇರಾಲು, ಅಂಬ್ರೋಟಿ ಇವರಿಂದ ಸಿದ್ಧವೇಷ ನೃತ್ಯ ಪ್ರದರ್ಶನ ಹಾಗೂ ಸುಳ್ಯದ ಕಲಾವಿದರಿಂದ ಅರೆಭಾಷೆ ಪೊಳ್ಮೆ ಕಾರ್ಯಕ್ರಮಗಳು ಜರುಗಿದವು.











