ಮಡಿಕೇರಿ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ಚೆಯ್ಯಂಡಾಣೆಯ ಅಯ್ಯಪ್ಪ ಯುವಕ ಸಂಘ ನರಿಯಂದಡ ಇದರ ಸಹಯೋಗದೊಂದಿಗೆ ಚೆಯ್ಯಂಡಾಣೆಯಲ್ಲಿ ನವೆಂಬರ್ 10ರಂದು ನಡೆಸಲು ಉದ್ದೇಶಿಸಿರುವ ಅರೆಭಾಷೆ ಗಡಿನಾಡ ಉತ್ಸವ – 2024ರ ಆಮಂತ್ರಣ ಪತ್ರಿಕೆಯನ್ನು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಹಾಗೂ
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ.ಎಸ್.ಪೊನ್ನಣ್ಣ ಅವರು ಮಡಿಕೇರಿಯಲ್ಲಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ, ರಿಜಿಸ್ಟ್ರಾರ್ ಚಿನ್ನಸ್ವಾಮಿ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಭಾರತೀಯ ಕಾಫಿ ಮಂಡಳಿಯ ಅಧ್ಯಕ್ಷ ದಿನೇಶ್ ಎಂ.ಜೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಪೂರ್ವಾಧ್ಯಕ್ಷರಾದ ಕೊಲ್ಯದ ಗಿರೀಶ್, ಲಕ್ಷ್ಮೀನಾರಯಣ ಕಜೆಗದ್ದೆ, ಚೆಯ್ಯಂಡಾಣೆ ಅರೆಭಾಷೆ ಗಡಿನಾಡ ಉತ್ಸವದ ಸದಸ್ಯ ಸಂಚಾಲಕರಾದ
ವಿನೋದ್ ಮೂಡಗದ್ದೆ, ಚಂದ್ರಾವತಿ ಬಡ್ಡಡ್ಕ, ಅಕಾಡೆಮಿ ಸದಸ್ಯರಾದ ಚಂದ್ರಶೇಖರ ಪೇರಾಲು, ಡಾ.ಜ್ಞಾನೇಶ್ ಎನ್,ಎ, ತೇಜಕುಮಾರ್ ಕುಡೆಕಲ್ಲು, ಲತಾಪ್ರಸಾದ್ ಕುದ್ಪಾಜೆ, ಲೋಕೇಶ್ ಊರುಬೈಲು, ಸಂದೀಪ್ ಪೂಳಕಂಡ, ಮೋಹನ್ ಪೊನ್ನಚನ, ಕುದುಪಜೆ ಕೆ. ಪ್ರಕಾಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಮಡಿಕೇರಿ ಶಾಸಕರಾದ ಡಾ.ಮಂತರ್ ಗೌಡ ಅವರಿಗೆ ಆಮಂತ್ರಣ ಪತ್ರಿಕೆಯನ್ನು ನೀಡಿ ಗಡಿನಾಡ ಉತ್ಸವಕ್ಕೆ ಆಮಂತ್ರಿಸಲಾಯಿತು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ದಕ್ಷಿಣ ಕನ್ನಡ ಹಾಗೂ ಕೊಡಗಿನ ಆರು ಗಡಿಭಾಗಗಳಲ್ಲಿ ಗಡಿನಾಡ ಉತ್ಸವವನ್ನು ಹಮ್ಮಿಕೊಂಡಿದ್ದು ಚೆಯ್ಯಂಡಾಣೆಯಲ್ಲಿ ನಡೆಸುತ್ತಿರುವ ಎರಡನೇ ಉತ್ಸವ ಇದಾಗಿರುತ್ತದೆ.