ಸುಳ್ಯ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಮಂಡೆಕೋಲು ಗ್ರಾಮ ಗೌಡ ಸಮಿತಿ ಇವರ ಸಹಕಾರದಲ್ಲಿ ಮಂಡೆಕೋಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ‘ಅಮೃತ ಸಭಾಭವನದಲ್ಲಿ’ ನಡೆದ ಅರೆಭಾಷೆ ಗಡಿನಾಡ ಉತ್ಸವ ಸಮಾಪನಗೊಂಡಿತು.ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಿದ್ದರು.ಲಯನ್ಸ್ ಮಾಜಿ
ರಾಜ್ಯಪಾಲರಾದ ಎಂ.ಬಿ. ಸದಾಶಿವ ಸಮಾರೋಪ ಭಾಷಣ ಮಾಡಿದರು. ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಭರತ್ ಮುಂಡೋಡಿ, ದ.ಕ. ಜಿಲ್ಲಾ ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಧನಂಜಯ ಅಡಂಗಾಯ, ಅರೆಭಾಷೆ ಅಕಾಡೆಮಿಯ ಪೂರ್ವಾಧ್ಯಕ್ಷರಾದ ಪಿ.ಸಿ. ಜಯರಾಮ, ಲಕ್ಷ್ಮೀನಾರಾಯಣ ಕಜೆಗದ್ದೆ, ಭಾಗವಹಿಸಿದ್ದರು.
ಸಮಾರಂಭದಲ್ಲಿ ಪ್ರದೇಶದ ಹಿರಿಯ ಅರೆಭಾಷಿಕ ದಂಪತಿ, ಕೃಷಿ ಹಾಗೂ ಹೈನುಗಾರಿಕಾ ಕ್ಷೇತ್ರ, ಶಿಕ್ಷಣ ಕ್ಷೇತ್ರ, ಸಾಂಸ್ಕೃತಿಕ ಕ್ಷೇತ್ರ, ಸಹಕಾರ ಕ್ಷೇತ್ರದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ವೇದಿಕೆಯಲ್ಲಿ ಶಿವಪ್ರಸಾದ್ ಉಗ್ರಾಣಿಮನೆ, ಅರೆಭಾಷೆ ಅಕಾಡೆಮಿ ಸದಸ್ಯರಾದ ಡಾ.ಎನ್.ಎ.ಜ್ಞಾನೇಶ್, ಚಂದ್ರಶೇಖರ ಪೇರಾಲು, ಲೋಕೇಶ್ ಊರುಬೈಲು, ಚಂದ್ರಾವತಿ ಬಡ್ಡಡ್ಕ, ಲತಾ ಕುದ್ಪಾಜೆ ಮತ್ತಿತರರು ಉಪಸ್ಥಿತರಿದ್ದರು.
ಅರೆಭಾಷೆ ಗಡಿನಾಡ ಉತ್ಸವದ ಅಂಗವಾಗಿ ‘ಅರೆಭಾಷೆ ಸಂಸ್ಕೃತಿನ ಉಳ್ಸಿ, ಸಾಹಿತ್ಯನ ಬೆಳ್ಸುವ ಕಾರ್ಯ’ ಕುರಿತು ಉಪನ್ಯಾಸ, ಅಕಾಡೆಮಿ ಪ್ರಕಟಿಸಿದ ಪುಸ್ತಕಗಳ ಕುರಿತು ಅವಲೋಕನ, ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಗಾಯಕ ಕೆ.ಆರ್.ಗೋಪಾಲಕೃಷ್ಣ ಅವರಿಂದ ಅರೆಭಾಷೆ ಗೀತ ಗಾಯನ ಕಾರ್ಯಕ್ರಮ ನಡೆಯಿತು.
.