ಮಡಿಕೇರಿ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರು ಗ್ರಾಮದ ಅರೆಭಾಷೆ, ಸಂಸ್ಕೃತಿ ಮತ್ತು ಅಭಿವೃದ್ಧಿ ಸಂಘ ಇವರ ಸಹಕಾರದಲ್ಲಿ ತೋರ ಸಮುದಾಯ ಭವನದ ಆವರಣದಲ್ಲಿ ಅರೆಭಾಷೆ ಗಡಿನಾಡ ಉತ್ಸವ ಕಾರ್ಯಕ್ರಮ ನಡೆಯಿತು.ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ
ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಟಿ.ಎಂ. ಧರ್ಮಜ ಉತ್ತಪ್ಪ ಮಾತನಾಡಿದರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಮಾತನಾಡಿ ಅಕಾಡೆಮಿಯಿಂದ ಅರೆಭಾಷೆ ಸಂಸ್ಕೃತಿ, ಸಾಹಿತ್ಯ ಜಾನಪದ ಕಲೆಗಳು ಮತ್ತಿತರ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಶ್ರಮಿಸಲಾಗುತ್ತಿದೆ. ಅರೆಭಾಷೆ ಸಾಂಸ್ಕೃತಿಕ ಕಲೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಹಾಗೆಯೇ ಸಾಹಿತ್ಯ ಚಟುವಟಿಕೆಗಳನ್ನು ಬಲಪಡಿಸುವಲ್ಲಿ ಅರೆಭಾಷೆ ಪುಸ್ತಕಗಳನ್ನು ಪ್ರಕಟಿಸಲಾಗುತ್ತದೆ ಎಂದು ವಿವರಿಸಿದರು.
ಕೆದಮುಳ್ಳೂರು ಗ್ರಾಮದ ಅರೆಭಾಷೆ ಸಂಸ್ಕೃತಿ ಮತ್ತು ಅಭಿವೃದ್ಧಿ ಸಂಘದ ಅಧ್ಯಕ್ಷರಾದ ಪೊಕ್ಕುಳಂಡ್ರ ಎಸ್.ದಿನೇಶ್, ಮಡಿಕೇರಿ ಕೊಡಗು ಗೌಡ ಸಮಾಜದ ನಿರ್ದೇಶಕರಾದ ತೋಟಂಬೈಲು ಕುಮಾರ, ವಿರಾಜಪೇಟೆ ಗೌಡ ಸಮಾಜದ ಅಧ್ಯಕ್ಷರಾದ ಮುಕ್ಕಾಟ ವಾಸು ಗಣಪತಿ, ಸದಸ್ಯ ಸಂಚಾಲಕರಾದ ಸೂದನ ಎಸ್.ಈರಪ್ಪ, ಸದಸ್ಯ ಸಂಚಾಲಕರಾದ ಮೋಹನ್ ಪೊನ್ನಚನ ಮಾತನಾಡಿದರು. ಕೆದಮುಳ್ಳೂರು ಗ್ರಾಮದ ಜಾನಪದ ವಿಭಾಗದ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಕುಡಿಯರ ಬಿ.ಅಮ್ಮುಣಿ, ಹಿರಿಯರಾದ ಪೊಕ್ಕುಳಂಡ್ರ ಕೆ.ಪಾಪಯ್ಯ.ತೋಟಂಬೈಲು ರಾಜು ಅವರನ್ನು ಇದೇ ಸನ್ಮಾನಿಸಿ, ಗೌರವಿಸಲಾಯಿತು.
ಉಳುವಾರನ ರೋಷನ್, ಕಲ್ಲುಮುಟ್ಟು ಜಸ್ಮಿ ಮತ್ತು ಚೈತ್ರ, ಬೈಮನ ಪ್ರೇಮ, ಸೂದನ ಈರಪ್ಪ, ಅಕಾಡೆಮಿ ರಿಜಿಸ್ಟ್ರಾರ್ ಚಿನ್ನಸ್ವಾಮಿ ಮೊದಲಾದವರಿದ್ದರು.














