ಮಡಿಕೇರಿ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಇದರ ಆಶ್ರಯದಲ್ಲಿ ಭಾಗಮಂಡಲ ನಾಡ್ ಗೌಡ ಸಮಾಜ, ಗೌಡ ಸಮಾಜ ಕರಿಕೆ, ಗೌಡ ಸಮಾಜ ಚೇರಂಬಾಣೆ, ಭಾಗಮಂಡಲ ನಾಡ್ ಗೌಡ ಯುವ ಒಕ್ಕೂಟ ಮತ್ತು ಗೌಡ ಮಹಿಳಾ ಒಕ್ಕೂಟ ಚೇರಂಬಾಣೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಅರೆಭಾಷೆ ಗಡಿನಾಡು ಉತ್ಸವ ಎ.15 ರಂದು ಪೂ.9ರಿಂದ ಭಾಗಮಂಡಲದ ತ್ರಿವೇಣಿ ಸಂಗಮದ ಬಳಿ ಆಯೋಜಿಸಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ತಿಳಿಸಿದ್ದಾರೆ. ಮಡಿಕೇರಿ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ
ಮಾತನಾಡಿದ ಅವರು ಅರೆಭಾಷೆ ಅಕಾಡೆಮಿ ಸ್ಥಾಪನೆಯ ದಶ ವರ್ಷದ ಸಂಭ್ರಮಾಚರಣೆಯ ನೆನಪಿಗಾಗಿ ರಾಜ್ಯದ ಅರೆಭಾಷಿಕರು ನೆಲೆಸಿರುವ ಗಡಿ ಪ್ರದೇಶದಲ್ಲಿ ಕಡೆ ಗಡಿನಾಡು ಉತ್ಸವ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಈಗಾಗಲೇ ಕೇರಳದ ಬಂದಡ್ಕ, ಸುಳ್ಯ ತಾಲೂಕಿನ ಗಡಿ ಗ್ರಾಮವಾದ ಮಂಡೆಕೋಲು, ಕೊಡಗಿನ ಚೆಯ್ಯಂಡಾಣೆ ಮತ್ತು ಕುಶಾಲನಗರದಲ್ಲಿ ಅರೆಭಾಷೆ ಗಡಿನಾಡ ಉತ್ಸವವನ್ನು ಆಚರಿಸಲಾಗಿದೆ.
ಭಾಗಮಂಡಲದ ಗಡಿನಾಡು ಉತ್ಸವವು ಎ.15 ರಂದು ಪೂರ್ವಾಹ್ನ 9 ಗಂಟೆಗೆ ಭಾಗಮಂಡಲದ ಕರಿಕೆ ಗೇಟ್ ಬಳಿಯಿಂದ ಅರೆಭಾಷೆ ಸಾಂಸ್ಕೃತಿಕ ಮೆರವಣಿಗೆಯೊಂದಿಗೆ ಆರಂಭವಾಗಲಿದೆ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ೭೨ನೇ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಶ್ರೀ ಆದಿಚುಂಚನಗಿರಿ ಶಾಖಾಮಠ ಹಾಸನ ಇದರ ಪರಮ ಪೂಜ್ಯ ಶ್ರೀ ಶಂಭುನಾಥ ಸ್ವಾಮೀಜಿಯವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಅಧ್ಯಕ್ಷರಾದ ಸದಾನಂದ ಮಾವಜಿ ಇವರು ವಹಿಸಲ್ಲಿದ್ದಾರೆ. ಕೊಡಗು ಜಿಲ್ಲೆಯ ಉಸ್ತುವಾರಿ ಸಚಿವರಾದ ಎನ್ ಎಸ್ ಬೋಸರಾಜು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣಗಾರರಾಗಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಮಡಿಕೇರಿ ಇದರ ಪ್ರಾಂಶುಪಾಲರಾದ ಡಾ. ಕೋರನ ಸರಸ್ವತಿ ಪ್ರಕಾಶ್ ಭಾಗವಹಿಸಲಿದ್ದಾರೆ. ಸಾಂಪ್ರದಾಯಿಕ ವಸ್ತುಪ್ರದರ್ಶನ ಉದ್ಘಾಟಕರಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿರುವ ಎ.ಎಸ್ ಪೊನ್ನಣ್ಣ ಆಗಮಿಸಲಿದ್ದಾರೆ. ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಾಧಕರನ್ನು ಸನ್ಮಾನಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂಥರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಜಿಲ್ಲಾಧಿಕಾರಿಗಳಾದ ಶ್ರೀ ವೆಂಕಟರಾಜ್, ಭಾಗಮಂಡಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕಾಳನ ರವಿ, ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ ತಿತೀರ, ಕರ್ನಾಟಕ ವಿಧಾನ ಸಭೆಯ ಮಾಜಿ ಸಭಾಧ್ಯಕ್ಷರಾದ ಕೆ. ಜಿ. ಬೋಪಯ್ಯ, ಮಡಿಕೇರಿ ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರ ಇದರ ಅಧ್ಯಕ್ಷರಾದ ಮಂದ್ರಿರ ಮೋಹನ್ದಾಸ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಕೊಲ್ಯದ ಗಿರೀಶ್, ಪಿ. ಸಿ ಜಯರಾಮ, ಶ್ರೀ ಲಕ್ಷ್ಮೀ ನಾರಾಯಣ ಕಜೆಗದ್ದೆ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮಡಿಕೇರಿ ಇದರ ನಿರ್ದೇಶಕರಾದ ಹೊಸೂರು ಜೆ. ಸತೀಶ್ ಕುಮಾರ್, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಕೊಡಗು ಗೌಡ ಮಹಿಳಾ ಒಕ್ಕೂಟ ಇದರ ಅಧ್ಯಕ್ಷರಾದ ಅಮೆ ದಮಯಂತಿ ಇವರುಗಳು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಅರೆಭಾಷೆ ಗಡಿನಾಡು ಉತ್ಸವ ಅಂಗವಾಗಿ ಪೂರ್ವಾಹ್ನ 9.30 ರಿಂದ ಅರೆಭಾಷೆ ಸಂಗೀತ ಕಾರ್ಯಕ್ರಮ, ನಂತರ ಸಭಾ ಕಾರ್ಯಕ್ರಮ ನಡೆಯಲಿದೆ. ಅಪರಾಹ್ನ ಎರಡು ಗಂಟೆಯಿಂದ ಗೌಡ ಮಹಿಳಾ ಒಕ್ಕೂಟ ಚೇರಂಬಾಣೆ ಮತ್ತು ಭಾಗಮಂಡಲ ನಾಡ ಗೌಡ ಯುವ ಒಕ್ಕೂಟ ಇವರಿಂದ ಅರಭಾಷೆ ರಸಪ್ರಶ್ನೆ ಕಾರ್ಯಕ್ರಮ, ಸಾಯಂಕಾಲ 3 ಗಂಟೆಯಿದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಅರೆಭಾಷೆ ಉತ್ಸವ ೨೦೨೫ರ ಈ ಅವಿಸ್ಮರಣೆಯ ಕಾರ್ಯಕ್ರಮದಲ್ಲಿ ಎಲ್ಲಾ ಅರೆಭಾಷಿಕರು ಮತ್ತು ಅರೆಭಾಷೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದು ಸದಾನಂದ ಮಾವಜಿ ವಿನಂತಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅಕಾಡೆಮಿ ಸದಸ್ಯರಾದ
ಸೂದನ ಎಸ್. ಈರಪ್ಪ,ಕುದುಪಜೆ ಕೆ. ಪ್ರಕಾಶ್,ಸಂದೀಪ್ ಪೂಳಕಂಡ, ಗೌಡ ಸಮಾಜ ಚೇರಂಬಾಣೆ ಇದರ ಅಧ್ಯಕ್ಷ ಕೊಡಪಾಲ ಗಣಪತಿ ಇದ್ದರು.