ಮಡಿಕೇರಿ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು 2025 ನೇ ಸಾಲಿನ ಗೌರವ ಪ್ರಶಸ್ತಿಯನ್ನು ಘೋಷಿಲಾಗಿದೆ. ಮೂರು ಮಂದಿ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಾಹಿತ್ಯ ಮತ್ತು ಸಂಶೋಧನಾ ಕ್ಷೇತ್ರದಿಂದ
ಅನಂತರಾಜ ಗೌಡ ಪುತ್ತೂರು,ಅರೆಬಾಷಿಕ ಸಂಘಟನಾ ಕ್ಷೇತ್ರದಿಂದ ಸುಳ್ಯ ಗುತ್ತಿಗಾರು ಮೂಲದವರಾದ ಬೆಳ್ತಂಗಡಿಯ ಲೋಕೇಶ್ವರಿ ವಿನಯಚಂದ್ರ ಮತ್ತು ಅರೆಭಾಷೆ ಸಾಹಿತ್ಯ ಕ್ಷೇತ್ರದಿಂದ
ಮಡಿಕೇರಿಯ ಕಟ್ರತನ ಲಲಿತ ಅಯ್ಯಣ್ಣ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು 50 ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ.

ಮಾ.14 ರಂದು ಮಂಗಳೂರಿನ ಊರ್ವ ಸ್ಟೋರ್ ಸಮೀಪದಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಮಾರಂಭದಲ್ಲಿ ಅಕಾಡೆಮಿ ಪ್ರಕಟಿತ ಪುಸ್ತಕಗಳ ಬಿಡುಗಡೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಲಾವಿದರಿಗೆ ವಾದ್ಯ ಪರಿಕರಗಳ ವಿತರಣೆ ಹಾಗೂ ಅರೆಭಾಷೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.









