ಸುಳ್ಯ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಮಡಪ್ಪಾಡಿಯ ಗ್ರಾಮ ಗೌಡ ಸಮಿತಿ ಮತ್ತು ಗೌಡ ಮಹಿಳಾ ಘಟಕಗಳ ಜಂಟಿ ಆಶ್ರಯದಲ್ಲಿ ಒಂದು ದಿನದ ‘ಅರೆಭಾಷೆ ಗ್ರಾಮೋತ್ಸವ –2026’ ಕಾರ್ಯಕ್ರಮವು ಮಾರ್ಚ್ 8ರಂದು ಮಡಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಅರೆಭಾಷೆ ಅಕಾಡೆಮಿಯ ಮಾಜಿ ಅಧ್ಯಕ್ಷ ಪಿ.ಸಿ. ಜಯರಾಮ ಉದ್ಘಾಟಿಸಲಿದ್ದಾರೆ. ಅರೆಭಾಷೆ ಅಕಾಡೆಮಿಯ
ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಮಡಪ್ಪಾಡಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವಿನಯ ಕುಮಾರ್ ಮುಳುಗಾಡು, ದ.ಕ. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ವಳಲಂಬೆಯ ಶ್ರೀ ಶಂಖಪಾಲ ಸುಬ್ಯಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ್ ಮತ್ತು ಮಡಪ್ಪಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಸದಾನಂದ ಬಲ್ಕಜೆ ಆಗಮಿಸಲಿದ್ದಾರೆ.ಉದ್ಘಾಟನೆಗೆ ಮುನ್ನ ಸಾಂಸ್ಕೃತಿಕ ಮೆರವಣಿಗೆ ನಡೆಯಲಿದೆ. ವಿವಿಧ ಬಗೆಯ ಪರಿಕರಗಳನ್ನು ತಯಾರಿಸುವುದು ಹಾಗೂ ಪರಿಕರಗಳ ಪ್ರಾತ್ಯಕ್ಷಿಕೆಗಳು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಖ್ಯಾತ ಹಾಡುಗಾರರಿಂದ ಅರೆಭಾಷೆ ಪದ್ಯ ಗೊಂಚಲು, ಕುಣಿತ ಮತ್ತು ವಿವಿಧ ಸ್ಪರ್ಧೆಗಳು ನಡೆಯಲಿವೆ.
ಸಂಜೆ ಗಂಟೆ 4ರಿಂದ ಸದಾನಂದ ಮಾವಜಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಬೆಳ್ತಂಗಡಿಯ ಪ್ರಸನ್ನ ಕಾಲೇಜಿನ ಉಪನ್ಯಾಸಕಿಸುಶ್ಮಿತಾ ಆದಿತ್ಯ ಚಿದ್ಗಲ್ ಸಮಾರೋಪ ಮಾತುಗಳನ್ನಾಡಲಿದ್ದಾರೆ. ಮುಖ್ಯ ಅತಿಥಿಯವರಾಗಿ ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಸ್ಥಾಪಕಾಧ್ಯಕ್ಷ ನಿತ್ಯಾನಂದ ಮುಂಡೋಡಿ, ದ.ಕ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ಗೌಡರ ಯುವ ಸೇವಾ ಸಂಘದ ಪೂರ್ವಾಧ್ಯಕ್ಷ ದಿನೇಶ್ ಮಡಪ್ಪಾಡಿ, ಮಡಪ್ಪಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಉಷಾ ಜಯರಾಮ, ಮಡಪ್ಪಾಡಿಯ ಸ.ಹಿ.ಪ್ರಾ. ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಕುಶಾಲಪ್ಪ ಪಾರೆಪ್ಪಾಡಿ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ದಿನೇಶ್ ಹಾಲೆಮಜಲು ಭಾಗವಹಿಸಲಿದ್ದಾರೆ. ಅರೆಭಾಷೆ ಸಿನೆಮಾ “ಕೋಲ” ಪ್ರದರ್ಶನ ಗೊಳ್ಳಲಿದೆ. ಖ್ಯಾತ ಕಲಾವಿದರಿಂದ ಅರೆಭಾಷೆ ಯಕ್ಷಗಾನ ‘’ಭಸ್ಮಾಸುರ ಮೋಹಿನಿ ಯಕ್ಷಗಾನ“ನಡೆಯಲಿದೆ.
ಮಡಪ್ಪಾಡಿ ಗ್ರಾಮದೊಳಗಿರುವ, ವಿವಾಹವಾಗಿ 50 ವರ್ಷಗಳು ಪೂರ್ತಿಯಾಗಿರುವ ದಂಪತಿಗಳಿಗೆ ವಿಶೇಷ ಗೌರವ, ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ನಡೆಯಲಿದೆ.
ಮಡಪ್ಪಾಡಿ ಗ್ರಾಮದ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಹಾಗೂ ಸದಸ್ಯ ಸಂಚಾಲಕಿ ಲತಾ ಪ್ರಸಾದ್ ಕುದ್ಪಾಜೆ ತಿಳಿಸಿದ್ದಾರೆ.









