ಶನಿವಾರಸಂತೆ:ಅರೆಭಾಷೆ, ಸಾಹಿತ್ಯ, ಸಂಸ್ಕೃತಿ, ಆಚಾರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸಲು ಸಂಘಟನೆಗಳಿಂದ ಸಾಧ್ಯ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಭಿಪ್ರಾಯಪಟ್ಟರು. ಸಂಗಯನಪುರ ಅರೆಭಾಷೆ ಗೌಡ ಸಮಾಜದ ಸಭಾಂಗಣದಲ್ಲಿ ಆಲೂರು-ಸಿದ್ದಾಪುರ ಅರೆಭಾಷೆ ಗೌಡ ಸಮಾಜದ ವತಿಯಿಂದ ಸಮುದಾಯದ ಸಾಧಕರಿಗಾಗಿ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು
ಮಾತನಾಡಿದರು.”ಅರೆಭಾಷೆ ಗೌಡ ಸಮಾಜದ ನಾನಾ
ಸಂಘಟನೆಗಳು ಭಾಷೆ, ಸಂಸ್ಕೃತಿ, ಆಚಾರ, ವಿಚಾರಗಳನ್ನು ಉಳಿಸಿಕೊಳ್ಳುವ ಸಲುವಾಗಿಕಾರ್ಯನಿರ್ವಹಿಸುತ್ತಿದೆ. ಇದರ ಜತೆಗೆ ಸಮುದಾಯದವರು ಶೈಕ್ಷಣಿಕ, ರಾಜಕೀಯ, ಸಾಂಸ್ಕೃತಿಕ, ಕ್ರೀಡೆ, ಸಾಮಾಜಿಕ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದಾರೆ. ಅರೆಭಾಷೆ ಮತ್ತು ಸಂಸ್ಕೃತಿಯನ್ನು ಬಲಪಡಿಸಿ ವಿಸ್ತರಿಸುವ ಉದ್ದೇಶದಿಂದ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯನ್ನು ಸ್ಥಾಪಿಸಲಾಗಿದೆ ಎಂದರು.

“ಅರೆಭಾಷೆ ಗೌಡ ಸಮಾಜದ ನಾನಾ ಸಂಘಟನೆಗಳು ಅರೆಭಾಷೆ ಅಭಿವೃದ್ಧಿ ಮತ್ತು ಸಂಸ್ಕೃತಿಯನ್ನು ಬೆಳೆಸುತ್ತಿದೆ. ಇದರ ಜತೆಗೆ ಸಮಾಜ ಸೇವೆಯಲ್ಲಿ ತೊಡಗಿ ಸಿಕೊಳ್ಳುವ ಕಾರ್ಯವನ್ನು ಮಾಡುತ್ತಿದೆ ಎಂದರು.
ಕುಶಾಲನಗರ ಅರೆಭಾಷೆ ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿ ಪ್ರಸಾದ್ ಮಾತನಾಡಿದರು.ಅರೆಭಾಷೆ ಗೌಡ ಸಮಾಜದ ಅಧ್ಯಕ್ಷ ದೇವಾಯಿರ ಗಿರೀಶ್ ಅಧ್ಯಕ್ಷತೆ ವಹಿಸಿದ್ದರು.
ಸೋಮವಾರಪೇಟೆಯಲ್ಲಿ ಸೇನೆಗೆ ಸೇರಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಸೇನಾ ತರಬೇತಿ ನೀಡುತ್ತಿರುವ ನಿವೃತ್ತ ಸೈನಿಕ ನಂಗಾರು ಚಂದ್ರಕುಮಾರ್ ಮತ್ತು ಪತ್ನಿ ರತ್ನ ದಂಪತಿಗೆ ಗೌಡ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಅರೆಭಾಷೆ ಗೌಡ ಸಮಾಜದ ಗೌರವಾಧ್ಯಕ್ಷ ಭಟ್ಯನ ಈರಪ್ಪ, ಕಾರ್ಯದರ್ಶಿ ಕುಯುಮುಡಿ ಜಯಕುಮಾರ್, ಸಮಾಜದ ಪ್ರಮುಖರಾದ ಕಡ್ಯದ ಅಶೋಕ್, ಕಡ್ಯದ ಶ್ಯಾಮಲಾ, ಪರ್ಲಕೋಟಿ ಶೈಲಾ ಸತೀಶ್, ಕೂಡಕಂಡಿ ಚಂದ್ರಮತಿ, ಟಿ. ಎಸ್. ಲೀಲಾಧರ್ ಮತ್ತಿತರರು ಉಪಸ್ಥಿತರಿದ್ದರು.