ಸುಬ್ರಹ್ಮಣ್ಯ:ವಿದ್ಯಾರ್ಥಿಗಳಿಗೆ ತಮ್ಮ ಭಾಷೆ ಮತ್ತು ಸಂಸ್ಕೃತಿಯ ಮಹತ್ವದ ಅರಿವು ಮೂಡಿದರೆ ಅದು ನಿರಂತರವಾಗಿ ಮುಂದೆ ಸಾಗುತ್ತದೆ. ಅವರು ಮುಂದಿನ ತಲೆಮಾರಿನ ಸಾಂಸ್ಕೃತಿ ರಾಯಭಾರಿಗಳು ಎಂದು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಹೇಳಿದರು. ಅವರು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ
ನಡೆದ ದಕ್ಷಿಣ ಕನ್ನಡ ಜಿಲ್ಲಾ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘಗಳ ಸಮ್ಮಿಲನ ಮತ್ತು ಸ್ಫರ್ಧೆಗಳ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
“ಕಾಲೇಜಿಲಿ ಅರೆಭಾಷೆ ಸಾಹಿತ್ಯ ಮತ್ತೆ ಸಾಂಸ್ಕೃತಿಕ ಸಂಘಗಳ ನಿರ್ವಹಣೆ ಮತ್ತೆ ಕಾರ್ಯಕ್ರಮಗ” ಕುರಿತು ನೆಹರೂ ಸ್ಮಾರಕ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾದ ಡಾ. ಅನುರಾಧ ಕುರುಂಜಿಯವರು ಉಪನ್ಯಾಸ ನೀಡಿದರು.
ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಅಧ್ಯಕ್ಷೆ ವಿಮಲಾ ರಂಗಯ್ಯ, ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಎನ್.ಎಸ್ ಮಾತನಾಡಿದರು. ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ನಂದಾ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಕಾಡೆಮಿ ಸದಸ್ಯ ಸಂಚಾಲಕ ಚಂದ್ರಶೇಖರ ಪೇಲಾರು ಸ್ವಾಗತಿಸಿರು. ಸದಸ್ಯೆ ಲತಾಪ್ರಸಾದ್ ಕುದ್ಪಾಜೆ ವಂದಿಸಿದರು. ಶ್ರುತಿ ಅಶ್ವಥ್ ಕಾರ್ಯಕ್ರಮ ನಿರೂಪಿಸಿದರು. ಸದಸ್ಯರಾದ ಚಂದ್ರಾವತಿ ಬಡ್ಡಡ್ಕ, ಪಿ.ಎಸ್. ಕಾರ್ಯಪ್ಪ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ಸಮಗ್ರ ಪ್ರಶಸ್ತಿಯಲ್ಲಿ ಪ್ರಥಮ ಸ್ಥಾನವನ್ನು ಎಸ್ಎಸ್ಪಿಯುಸಿ ಸುಬ್ರಹ್ಮಣ್ಯ ಹಾಗೂ ದ್ವಿತೀಯ ಸ್ಥಾನವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಪಡೆದುಕೊಂಡಿತು.





