ಅರಂತೋಡು:ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮತ್ತು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಹೋಬಳಿ ಘಟಕ ಇದರ ಆಶ್ರಯದಲ್ಲಿ ನೆಹರು ಮೆಮೋರಿಯಲ್ ಪದವಿ ಪೂರ್ವ ವಿದ್ಯಾಲಯ ಅರಂತೋಡು ಇಲ್ಲಿ ಅರೆ ಭಾಷೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮ ನಡೆಯಿತು. ನೆಹರು ಮೆಮೋರಿಯಲ್ ಪದವಿ ಪೂರ್ವ ವಿದ್ಯಾಲಯದ
ಸಂಚಾಲಕ ವಸಂತ್ ಎ.ಸಿ. ಕಾರ್ಯಕ್ರಮವನ್ನು ಉದ್ಘಾಟಿಸಿ ಅರೆ ಭಾಷೆಯು ನಮ್ಮ ಈ ಭಾಗದ ಅಸ್ಮಿತೆಯಾಗಿದ್ದು ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದು ಎಂದು ಕರೆಯಿತ್ತ ರು. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೆರಾಲ್ ಅರೆ ಭಾಷೆಯಲ್ಲಿ ಸಾಹಿತ್ಯ ರಚನೆ ಸಾಧ್ಯತೆ ಎಂಬ ವಿಚಾರದ ಬಗ್ಗೆ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಪ್ರಾಂಶುಪಾಲ ರಮೇಶ, ಮುಖ್ಯ ಶಿಕ್ಷಕ ಸೋಮಶೇಖರ್, ಪಾಪ್ಯುಲರ್ ಎಜುಕೇಶನ್ ಸೊಸೈಟಿ ಅರಂತೋಡು ಇದರ ಕಾರ್ಯದರ್ಶಿ ಎ ಅಬ್ದುಲ್ಲ ಭಾಗವಹಿಸಿದ್ದರು ಸಭೆಯಲ್ಲಿ ದಕ ಜಿಲ್ಲಾಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀ ಕಿಶೋರ್ ಕುಮಾರ್ ಕಿರ್ಲಾಯ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಗೆ
ವಿವಿಧ ಸ್ಪರ್ಧೆಗಳನ್ನು ನಡೆಸಿ ಬಹುಮಾನಗಳನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಭಾವನಾ ಸುಗಮ ಸಂಗೀತ ಬಳಗದ ಕೆ ಆರ್ ಗೋಪಾಲಕೃಷ್ಣ ಇವರು ಅರೆ ಭಾಷೆ ಗಾಯನ ಕಾರ್ಯಕ್ರಮವನ್ನು ನಡೆಸಿಕೊಟ್ಟರು ವೇದಿಕೆಯಲ್ಲಿ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಚಂದ್ರಮತಿ ಕೆ, ತೇಜಸ್ವಿ ಕಡಪಳ,ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತಡ್ಕ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಚಾಲಕಿ ಚಂದ್ರಾವತಿ ಬಡ್ಡಡ್ಕ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು . ಪ್ರಾಂಶುಪಾಲ ರಮೇಶ್ ಇವರು ವಂದಿಸಿದರು.












