ಚೆಂಬು:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ 3ನೇ ಅರೆಭಾಷೆ ಸಾಹಿತ್ಯ ಸಮ್ಮೇಳನ
ಚೆಂಬು ಗ್ರಾಮದ ಕೂಡಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತಿದೆ. ಸಮ್ಮೇಳನದ ಅಂಗವಾಗಿ ಸಂಪಾಜೆ ಗೇಟ್ ಬಳಿಯಿಂದ ಸಮ್ಮೇಳನದ ವೇದಿಕೆ ತನಕ
ಆಕರ್ಷಕ ಮೆರವಣಿಗೆ ನಡೆಯಿತು. ಸಮ್ಮೇಳನಾಧ್ಯಕ್ಷರಾದ ಲೀಲಾ ದಾಮೋದರ ಕುಂದಲ್ಪಾಡಿ ಅವರನ್ನು ತೆರೆದ ವಾಹನದಲ್ಲಿ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಕರೆ ತರಲಾಯಿತು. ಮೆರವಣಿಗೆಗೆ ಇಂದಿರಾ ದೇವಿಪ್ರಸಾದ್ ಸಂಪಾಜೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ

ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಅಕಾಡೆಮಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.ಅರೆಭಾಷೆ ಸಾಹಿತ್ಯ ಸಮ್ಮೇಳನದ ಅಂಗವಾಗಿ ಏರ್ಪಡಿಸಲಾದ ಪುಸ್ತಕ ಪ್ರದರ್ಶನವನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಪ್ರಾಚ್ಯ ವಸ್ತುಗಳ ಪ್ರದರ್ಶನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ

ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಉದ್ಘಾಟಿಸಿದರು.
ಪುಸ್ತಕ ಪ್ರದರ್ಶನ, ಪ್ರಾಚ್ಯ ವಸ್ತುಗಳ ಪ್ರದರ್ಶನ, ತಿಂಡಿ ತಿನಸು ಮಳಿಗೆ, ಹೂವಿನ ಗಿಡಗಳ ಮಳಿಗೆ, ಚಿತ್ರ ಮಳಿಗೆ, ತರಕಾರಿ ಗಿಡಗಳ ಬೀಜಗಳ ಮಳಿಗೆ, ಬಟ್ಟೆಬರೆಗಳ ಮಳಿಗೆ, ಆಟಿಕೆ ಮತ್ತು ಆಭರಣ ಮಳಿಗೆಗಳನ್ನು ಏರ್ಪಡಿಸಲಾಗಿದ್ದು ಇದು ವಿಶೇಷ ಆಕರ್ಷಣೆಯಾಗಿತ್ತು.


















