ಸುಳ್ಯ:ಮಂಗಳೂರು ವಿಶ್ವ ವಿದ್ಯಾನಿಲಯದ ಅರೆಭಾಷೆ ಸಂಶೋಧನಾ ಕೇಂದ್ರದ ಕಾರ್ಯಕಾರಿ ಸಮಿತಿಯ ಮೊದಲ ಸಭೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪಿ.ಎಲ್.ಧರ್ಮ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಕುಲಸಚಿವರು, ಹಣಕಾಸು ಅಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು. ವಿವಿಧ ವಿಷಯಗಳ ಬಗ್ಗೆ
ಚರ್ಚೆ ನಡೆಯಿತು. ಅರೆಭಾಷೆ ಮಾತನಾಡುವವರ ಜನರ ಜನಗಣತಿ ನಡೆಸಬೇಕು ಎಂದು ಸಭೆಯಲ್ಲಿ ಭಾಗವಹಿಸಿದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಸಲಹೆ ನೀಡಿದರು. ಈ ಕುರಿತು ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಯಿತು. ಸಂಶೋಧನಾ ಕೇಂದ್ರದ ಸಂಯೋಜಕರಾದ ವಿಶ್ವನಾಥ ಬದಿಕಾನ ಸದಸ್ಯರಾದ ಲಕ್ಷ್ಮೀ ನಾರಾಯಣ ಕಜೆಗದ್ದೆ, ಸ್ಮಿತಾ ಅಮೃತರಾಜ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.