ಸುಳ್ಯ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಸುಳ್ಯದ ನೆಹರೂ ಸ್ಮಾರಕ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಸಂಭ್ರಮಾಚರಣೆಯ ಪ್ರಯುಕ್ತ ಅರೆಭಾಷೆ ರಾಷ್ಟ್ರೀಯ ವಿಚಾರ ಸಂಕಿರಣ 24ರಂದು ನೆಹರೂ ಸ್ಮಾರಕ ಮಹಾವಿದ್ಯಾಲಯದ ಕೆವಿಜಿ ಷಷ್ಟ್ಯಬ್ದ ರಂಗಮಂದಿರದಲ್ಲಿ ಉದ್ಘಾಟನೆಗೊಂಡಿತು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಅಧ್ಯಕ್ಷ
ಡಾ. ಕೆ.ವಿ. ಚಿದಾನಂದ ವಿಚಾರಣ ಸಂಕಿರಣವನ್ನು
ಉದ್ಘಾಟಿಸಿದರು. ನಮ್ಮ ಭಾಷೆಗಳು ನಶಿಸಿ ಹೋಗದಂತೆ ಉಳಿಸಿ ಬೆಳೆಸಿ ಅಭಿವೃದ್ಧಿ ಪಡಿಸಬೇಕು ಎಂದು ಅವರು ಹೇಳಿದರು. ಭಾಷೆಯ ಬೆಳವಣಿಗೆಗೆ ಸಾಹಿತ್ಯವನ್ನು ಪ್ರೋತ್ಸಾಹಿಸಬೇಕು ಎಂದ ಅವರು ಅರೆಭಾಷೆ ಅಕಾಡೆಮಿ ಸ್ಥಾಪನೆಯಾದ ಬಳಿಕ ಭಾಷೆಯ ವೈಭವ ಹೆಚ್ಚಿದೆ ಎಂದು ಅಭಿಪ್ರಾಯಪಟ್ಟರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಮಾತನಾಡಿ ‘ಅರೆ ಭಾಷೆಯು ರಾಜ್ಯದ ಗಡಿ ಮೀರಿ ದೇಶದೆಲ್ಲೆಡೆ ಪಸರಿಸಬೇಕು ಎಂಬುದು ಅಕಾಡೆಮಿಯ ಆಶಯ. ಅದಕ್ಕಾಗಿ ಅಕಾಡೆಮಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಹೇಳಿದರು. ಭಾಷೆ, ಸಂಸ್ಕೃತಿಯನ್ನು ಬೆಳೆಸಿ ಮುಂದಿನ ತಲೆಮಾರಿಗೆ ಹಸ್ತಾಂತರ ಆಗಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಪ್ರಧಾನ ಕಾರ್ಯದರ್ಶಿ ಮುಖ್ಯ ಅತಿಥಿಯಾಗಿದ್ದರು.
ಅಕಾಡೆಮಿಯ ಸದಸ್ಯರಾದ ಡಾ.ಎನ್.ಎ.ಜ್ಞಾನೇಶ್, ಚಂದ್ರಶೇಖರ ಪೇರಾಲು, ಗೋಪಾಲ ಪೆರಾಜೆ, ಚಂದ್ರಾವತಿ ಪೆರಾಜೆ, ಕುದ್ಪಾಜೆ ಪ್ರಕಾಶ್, ತೇಜಕುಮಾರ್ ಬಡ್ಡಡ್ಕ, ಲತಾ ಪ್ರಸಾದ್ ಕುದ್ಪಾಜೆ, ನೆಹರೂ ಸ್ಮಾರಕ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಂ.ರುದ್ರಕುಮಾರ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ.ರೈ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ.ಟಿ.ವಿಶ್ವನಾಥ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಸದಸ್ಯ ಸಂಚಾಲಕ ಚಂದ್ರಶೇಖರ ಪೇರಾಲು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಂಶುಪಾಲ ಡಾ.ರುದ್ರಕುಮಾರ್ ಎಂ.ಎಂ.ವಂದಿಸಿದರು. ಉಪನ್ಯಾಸಕಿ ಡಾ.ಅನುರಾಧಾ ಕುರುಂಜಿ ಕಾರ್ಯಕ್ರಮ ನಿರೂಪಿಸಿದರು.






