ಎಲಿಮಲೆ:ಸಂಸ್ಕೃತಿ ಮತ್ತು ಸಾಹಿತ್ಯವನ್ನು ಉಳಿಸಿ ಬೆಳೆಸುವ ಹಾಗೂ ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ನಮ್ಮದಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೈ ಎಸ್ ಹರಗಿ ಹೇಳಿದರು.ಎಲಿಮಲೆ
ಸರಕಾರಿ ಪ್ರೌಢ ಶಾಲೆಯಲ್ಲಿ ಕರ್ನಾಟಕ ಅರೆ ಭಾಷೆ ಮತ್ತು ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ನಡೆದ ಅರೆ ಭಾಷೆ ಸಂಸ್ಕೃತಿ ಮತ್ತು ಕಲಾ ಶಿಬಿರವನ್ನು
ಉದ್ಘಾಟಿಸಿ ಮಾತನಾಡಿದರು.ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಿದ್ದರು.ಕ್ಯಾಂಪ್ಕೋ ನಿರ್ದೇಶಕ ಎ.ವಿ.ತೀರ್ಥರಾಮ, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಪುರುಷೋತ್ತಮ ಸುಳ್ಳಿ, ಶಾಲಾ ಮುಖ್ಯ ಶಿಕ್ಷಕಿ ಸಂಧ್ಯಾ ಕುಮಾರ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಅರೆಭಾಷೆ ಅಕಾಡೆಮಿಯ ಸದಸ್ಯರಾದ ಕಾರ್ಯಪ್ಪ ಪಿ ಎಸ್, ಲೋಕೇಶ್ ಊರುಬೈಲು, ವಿನೋದ್ ಮೂಡಗದ್ದೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ
ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ವೈ ಎಸ್ ಹರಗಿ ಮತ್ತು ಕ್ಯಾಂಪ್ಕೋ ನಿರ್ದೇಶಕರಾದ ತೀರ್ಥರಾಮ ಎ ವಿ ಇವರನ್ನು ಅಕಾಡೆಮಿ ವತಿಯಿಂದ ಗೌರವಿಸಲಾಯಿತು . ಕಾರ್ಯಕ್ರಮದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ವಿಷ್ಣು ಭಟ್ ಮೂಲೆ ತೋಟ,ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು,ನಿವೃತ್ತ ಶಿಕ್ಷಕಿ ತಿರುಮಲೇಶ್ವರಿ ಸಭೆಯಲ್ಲಿ ಉಪಸ್ಥಿತರಿದ್ದರು. ಸದಸ್ಯ ಸಂಚಾಲಕ ಚಂದ್ರಶೇಖರ್ ಪೆರಾಲು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಹಿರಿಯ ವಿದ್ಯಾಥಿ ಸಂಘದ ಅಧ್ಯಕ್ಷ ರಾಜೇಶ್ ಅಂಬೆಕಲ್ಲು ವಂದಿಸಿದರು. ಮುರಳಿಧರ ಪೀಚೆ ಕಾರ್ಯಕ್ರಮ ನಿರೂಪಿಸಿದರು ದಿವ್ಯ ಪೂಂಬಾಡಿ, ಸಂಗೀತ ಕುಕ್ಕುಜಡ್ಕ ಹಾಗೂ ಜನನಿ ಕಾರ್ಯಕ್ರಮಕ್ಕೆ ಸಹಕರಿಸಿದರು.ದಿನಗಳ ಕಾಲ ಈ ಶಿಬಿರವು ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿಯ ವಿಚಾರಗಳ ಬಗ್ಗೆ ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆ ನಡೆಯಿತು.










