ಕಾನ್ಸಾಸ್ ಸಿಟಿ: ಫಿಫಾ ವಿಶ್ವಕಪ್ 2026ರ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡವು ಹೆಚ್ಚುವರಿ ಸಮಯದಲ್ಲಿ ಸ್ವಿಟ್ಜರ್ಲೆಂಡ್ ತಂಡವನ್ನು 3-1 ಗೋಲುಗಳಿಂದ ಮಣಿಸಿ ಸೆಮಿಫೈನಲ್ ತಲುಪಿದೆ.ಪಂದ್ಯ ಆರಂಭವಾದ 10ನೇ ನಿಮಿಷದಲ್ಲಿ ಅರ್ಜೆಂಟೀನಾ ಪರ
ಅಲೆಕ್ಸಿಸ್ ಮ್ಯಾಕ್ ಅಲಿಸ್ಟರ್ ಅವರು ಗೋಲು ಗಳಿಸುವ ಆರಂಭಿಕ ಮುನ್ನಡೆ ಒದಗಿಸಿದರು. 67ನೇ ನಿಮಿಷದಲ್ಲಿ ಸ್ವಿಟ್ಜರ್ಲೆಂಡ್ನ
ಡ್ಯಾನ್ ಎನ್ಡೋಯ್ ಗೋಲು ದಾಖಲಿಸಿ, ಸಮಬಲ ಸಾಧಿಸಲು ನೆರವಾದರು.
90 ನಿಮಿಷಗಳ ಆಟ ಪೂರ್ಣಗೊಂಡಾಗ ಉಭಯ ತಂಡಗಳು ತಲಾ ಒಂದೊಂದು ಗೋಲು ದಾಖಲಿಸಿ, ಸಮಬಲ ಸಾಧಿಸಿದ್ದರಿಂದ ಹೆಚ್ಚುವರಿ ಸಮಯ ನೀಡಲಾಯಿತು. ಈ ಹಂತದಲ್ಲಿ ಅರ್ಜೆಂಟೀನಾ ಪರ 112ನೇ ನಿಮಿಷದಲ್ಲಿ ಜೂಲಿಯನ್ ಅಲ್ವಾರೆಜ್ ಗೋಲು ದಾಖಲಿಸಿ ಮುನ್ನಡೆ ತಂದುಕೊಟ್ಟರು. ಅಂತಿಮ ಹಂತದಲ್ಲಿ ಲೌಟಾರೊ ಮಾರ್ಟಿನೆಜ್ ಮತ್ತೊಂದು ಗೋಲು ದಾಖಲಿಸುವ ಮೂಲಕ ಅರ್ಜೆಂಟೀನಾ ತಂಡಕ್ಕೆ 3–1ರ ಅಂತರದಲ್ಲಿ ಗೆಲುವು ಸಾಧಿಸಲು ನೆರವಾದರು.





